ಹುಬ್ಬಳ್ಳಿ : ಹತ್ಯೆಗೊಳಗಾದ ಹಿಂದು ಯುವತಿ ನೇಹಾ ನಿವಾಸಕ್ಕೆ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರಮೋದ್ ಮುತಾಲಿಕ್ ಸೇರಿದಂತೆ ವಿವಿಧ ಗಣ್ಯರು ಭೇಟಿ ನೀಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ನೇಹಾ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಆದಷ್ಟು ಬೇಗ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಆದರೆ, ತನಿಖೆಯ ಬೆಳವಣಿಗೆ ಗಮನಿಸಿದರೆ ಸಿಐಡಿ ತನಿಖೆಯಿಂದ ನ್ಯಾಯಸಿಗುವ ಭರವಸೆ ನಮಗೆ ಹಾಗೂ ಕುಟುಂಬಕ್ಕಿಲ್ಲ. ಸಚಿವರ ಹೇಳಿಕೆ ಗಮನಿಸಿದರೆ ಪರೋಕ್ಷವಾಗಿ ಅಲ್ಪಸಂಖ್ಯಾತರಿಗೆ ಬೆಂಬಲ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಆರೋಪಿಸಿದರು. ಈ ಪ್ರಕರಣವನ್ನು ರಾಜಕಾರಣಕ್ಕೆ ಬಳಸಿಕೊಳ್ಳುವ ಅವಶ್ಯಕತೆ ಪಕ್ಷಕ್ಕಿಲ್ಲ. ಯಾರು ಕೂಡ ಇದನ್ನು ಜಾತಿ, ಧರ್ಮಕ್ಕೆ ಬಳಸಿಕೊಳ್ಳಬಾರದು ಎಂದರು