Home » ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ತಾಯಿ ಬಗಳಾಂಬ ದೇಗುಲ
 

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ತಾಯಿ ಬಗಳಾಂಬ ದೇಗುಲ

by Kundapur Xpress
Spread the love

ಕುಂದಾಪುರ: ನಗರದ ಚಿಕ್ಕಮ್ಮನ ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಪುನರ್‌ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆಯು ಫೆ.20 ರಿಂದ 23 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಗುರು ಪರಾಶಕ್ತಿ ಮಠ-ಮರಕಡದ ಶ್ರೀ ನರೇಂದ್ರನಾಥ ಯೋಗೇಶ್ವರೇಶ್ವರ ಸ್ವಾಮಿಗಳ ಆಶೀರ್ವಾದದೊಂದಿಗೆ ವಿದ್ವಾನ್ ಕೋಟ ಕೆ. ಚಂದ್ರಶೇಖರ್ ಸೋಮಯಾಜಿ ನೇತೃತ್ವದಲ್ಲಿ ಜರಗಲಿದೆ.

ಫೆ.20ರಂದು ಸಾಮೂಹಿಕ ಪ್ರಾರ್ಥನೆ, ಗಣಯಾಗ, ಗುರು ಸನ್ನಿಧಿಯಲ್ಲಿ ನವಕ ಪ್ರಧಾನ ಕಲಾವೃದ್ಧಿ ಹೋಮ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ಶ್ರೀ ಬಗಳಾಂಬಾ ತಾಯಿಯ ಕಲಾ ಸಂಕೋಚ ನಡೆಯಲಿದೆ.

ಫೆ.21 ರಂದು ಬೆಳಿಗ್ಗೆ ಪುಣ್ಯಾಹ, ಬಿಂಬ ಶುದ್ಧಿ ಜಲಾಧಿವಾಸಸಪರಿವಾರ ದೇವರಾದ ಶ್ರೀ ಕಾಲಭೈರವೇಶ್ವರ, ಶ್ರೀ ಆಂಜನೇಯ ಮತ್ತು ಶ್ರೀ ನಾಗ ದೇವರಿಗೆ ಕಲಶಾಭಿಷೇಕ, ಸತ್ಯನಾರಾಯಣ ಪೂಜೆ ನಡೆಯಲಿದೆ. ಪ್ರತಿಷ್ಠಾಧಿ ವಾಸ ಹೋಮಗಳು ನಡೆದ ಬಳಿಕ ಅಮೇಜಿಂಗ್ ಸ್ಪೆಪರ್ಸ್ ಕಂಚುಗೋಡು ತ್ರಾಸಿ ಅವರಿಂದ ಭಕ್ತಿ-ಭಾವ-ನಾಟ್ಯ ಕಾರ್ಯಕ್ರಮ ನಡೆಯಲಿದೆ.

ಫೆ.22ರಂದು ಪುಣ್ಯಾಹ, ಬೆಳಿಗ್ಗೆ 5.20ಕ್ಕೆ ರತ್ನನ್ಯಾಸ ಪೂರ್ವಕ ಶ್ರೀ ಬಗಳಾಂಬ ತಾಯಿಯ ಪುನರ್ ಪ್ರತಿಷ್ಠೆ ಜೀವ ಕುಂಭಾಭಿಷೇಕ, ಪ್ರಾಣ ಪ್ರತಿಷ್ಠೆ ಕಲಾಭಿವೃದ್ಧಿ ಹೋಮ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ 12.30 ಕ್ಕೆ ಅನ್ನ ಸಂತರ್ಪಣೆ ನಡೆಯಲಿದೆ.

ಸಂಜೆ 5ಕ್ಕೆ ಪುಣ್ಯಾಹ, ಶಾಂತಿ ಹೋಮ, ಬ್ರಹ್ಮಕಲಶಸ್ಥಾಪನೆ, ಪ್ರದಾನಾಧಿವಾಸ ಹೋಮ ನಡೆಯಲಿದೆ. ರಾತ್ರಿ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಚಕ್ರ – ಚಂಡಿಕೆ ಯಕ್ಷಗಾನ ಪ್ರಸಂಗ ನಡೆಯಲಿದೆ.

ಫೆ.23ರಂದು ಚಂಡಿಕಾಯಾಗ ಬ್ರಹ್ಮಕಲಶಾಭಿಷೇಕ ಪಲ್ಲಪೂಜೆ, ತೀರ್ಥ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಲಿದೆ

ಸಂಜೆ ಶ್ರೀ ಮಾಸ್ತಿಯಮ್ಮ ಭಜನಾ ಮಂಡಳಿ ಮದ್ದುಗುಡ್ಡೆ ಅವರಿಂದ ಭಜನೆ, ರಾತ್ರಿ 7ಕ್ಕೆ ಹೂವಿನ ಪೂಜೆ, ವಿಶೇಷ ರಂಗಪೂಜೆ ಜರಗಲಿದೆ. ರಾತ್ರಿ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ನಡೆಯಲಿದೆ ಎಂದು ದೇವಳದ ಆಡಳಿತ ಧರ್ಮದರ್ಶಿಗಳಾದ ಗಣಪತಿ ಸುವರ್ಣರವರು ತಿಳಿಸಿದ್ದಾರೆ

   

Related Articles

error: Content is protected !!