Home » ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ
 

ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

by Kundapur Xpress
Spread the love

ಕುಂದಾಪುರ ‌: ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕು ಬಗರ್ ಹುಕುಂ ಅಕ್ರಮ ಸಕ್ರಮ ಜಾಗ ಮಂಜೂರಾತಿಯ ಸಮಿತಿ ಸಭೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಅಧ್ಯಕ್ಷತೆಯಲ್ಲಿ ಕುಂದಾಪುರ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಜರುಗಿತು.

ಸಭೆಯಲ್ಲಿ ಒಟ್ಟು 18 ಕಡತಗಳನ್ನು ಮಂಜೂರಾತಿಗಾಗಿ ಶಿಫಾರಸ್ಸು ಮಾಡಲಾಯಿತು. ಹಲವಾರು ವರ್ಷಗಳಿಂದ ಮಂಜೂರಾತಿಗೆ ಬಾಕಿ ಇರುವ ಅರ್ಹ ಅಕ್ರಮ ಸಕ್ರಮ ಅರ್ಜಿಗಳನ್ನು ಆದಷ್ಟು ಬೇಗ ತನಿಖೆ ನಡೆಸಿ ಮಂಜೂರಾತಿಗೆ ಕ್ರಮ ವಹಿಸಲು ಶಾಸಕರು ಸೂಚಿಸಿದರು.

ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿಯ ಕಾರ್ಯದರ್ಶಿ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ ಹೆಗಡೆ, ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಸಮಿತಿಯ ಸದಸ್ಯರಾದ ಸದಾನಂದ ಶೆಟ್ಟಿ ಕೆದೂರು,ಹಾಗೂ ಅರ್ಹ ಫಲಾನುಭವಿಗಳು ಉಪಸ್ಥಿತರಿದ್ದರು.

 

Related Articles

error: Content is protected !!