ಮಂಗಳೂರು : ಬಕ್ರೀದ್ ಹಿನ್ನೆಲೆಯಲ್ಲಿ ಕುರ್ಬಾನಿ ಹೆಸರಿನಲ್ಲಿ ಅಕ್ರಮವಾಗಿ ಗೋಸಾಗಾಟ ಗೋ ಹತ್ಯೆ ಸಾಧ್ಯತೆಗಳಿದ್ದು ರಾಜ್ಯ ಸರಕಾರ ಮತ್ತು ಜಲ್ಲಾಡಳಿತ ಅಕ್ರಮ ಗೋ ಸಾಗಾಟ ಹಾಗೂ ಗೋ ಹತ್ಯೆಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ವಿಶೇಷ ಪೊಲೀಸ್ ತಂಡ ರಚಿಸಿ ನಾಖಾ ಬಂದಿ ಹಾಕಬೇಕು ಎಂದು ಬಜರಂಗದಳ ಒತ್ತಾಯಿಸಿದೆ
ಬಕ್ರೀದ್ ಹಬ್ಬದ ದಿನಗಳಲ್ಲಿ ಜಾನುವಾರುಗಳ ವಧೆ ತಡೆಗಟ್ಟಲು ಕರ್ನಾಟಕ ಸರಕಾರ ಪಶು ಪಾಲನ ಮತ್ತು ಪಶುವೈದ್ಯ ಇಲಾಖೆಯಿಂದ ಈಗಾಗಲೇ ಉನ್ನತ ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಆದರೂ ಕುರ್ಬಾನಿಗೆ ತಯಾರಿ ನಡೆಯುತ್ತಿರುವ ಬಗ್ಗೆ ಮಾಹಿತಿಗಳು ಬರುತ್ತಿದ್ದು ಗೋಹತ್ಯೆ ತಡೆಗೆ ಆಗ್ರಹಿಸಿ ಈಗಾಗಲೇ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ ಮುಂದೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೂ ಮನವಿ ಸಲ್ಲಿಸಲಾಗುವುದು ಎಂದು ಬಜರಂಗದಳದ ಪ್ರಾಂತ ಸಂಯೋಜಕರಾದ ಸುನಿಲ್ ಕೆ ಆರ್ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು