ಕುಂದಾಪುರ: ಕುಂದಾಪುರದ ಖಾರ್ವಿಕೇರಿ ನಿವಾಸಿಯಾದ ರಾಘವೇಂದ್ರ ಶೇರುಗಾರ್ ಯಾನೆ ಬನ್ಸ್ ರಾಘು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಶಿವಮೊಗ್ಗಾದ ರೈಲ್ವೆ ನಿಲ್ದಾಣದ ಬಳಿ ಬಂಧಿಸಿ ಕುಂದಾಪುರದ 2 ನೇ ಹೆಚ್ಚುವರಿ ಸಿವಿಲ್ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಇಬ್ಬರು ಆರೋಪಿಗಳಿಗಳನ್ನು ಹೆಚ್ಚಿನ ತನಿಖೆಗಾಗಿ 3 ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಬೆಳ್ಳಿಯಪ್ಪ ವೃತ್ತ ನಿರೀಕ್ಷಕ ನಂದಕುಮಾರ್ ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಪಿ.ಎಂ.ದಿವಾಕರ್ ನೇತೃತ್ವದಲ್ಲಿ 3 ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳಾದ ಶಿವಮೊಗ್ಗ ಮೂಲದ ಶಫಿಯುಲ್ಲಾ (40 ವರ್ಷ) ಹಾಗೂ ಇಮ್ರಾನ್ (43ವರ್ಷ) ಎಂಬವರನ್ನು ಬಂಧಿಸಲಾಗಿದೆ
ನಿನ್ನೆ ಬೆಳಿಗ್ಗೆ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಆರೋಪಿಗಳನ್ನು ವೈಧ್ಯಕೀಯ ತಪಾಸಣೆಗೆ ಒಳಪಡಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಯಿತು ಆರೋಪಿಗಳನ್ನು ಕಸ್ಟಡಿಗೆ ಪಡೆದ ಪೊಲೀಸರು ಮಧ್ಯಾಹ್ನ ಚಿಕ್ಕನ್ ಸಾಲ್ ರಸ್ತೆಯ ಡೆಲ್ಲಿ ಬಜಾರ್ ಬಳಿ ಕರೆತಂದು ಸ್ಥಳ ಮಹಜರು ನಡೆಸಿದರು
ಕುಂದಾಪುರ ಪೊಲೀಸ್ ಠಾಣಾಧಿಕಾರಿ ವಿನಯ್ ಕೊರ್ಲಹಳ್ಳಿ ಶಂಕರನಾರಾಯಣ ಠಾಣಾಧಿಕಾರಿ ಮಧು ಹಾಗೂ ಸಿಬ್ಬಂದಿಗಳಾದ ರಾಮ ಮಧುಸೂದನ್ ಶ್ರೀಧರ್ ರಾಘವೇಂದ್ರ ಉಪ್ಪುಂದ ಹಾಗೂ ರಾಮು ಹೆಗ್ಡೆ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ
ಕಾರಿಗೆ ಸೈಡ್ ಕೊಡುವ ಕ್ಷುಲ್ಲಕ ವಿಚಾರದಲ್ಲಿ ನಡೆದ ಘಟನೆ ಬನ್ಸ್ ರಾಘುವಿನ ಕೊಲೆಯಲ್ಲಿ ಅಂತ್ಯ ಕಂಡಿದ್ದು ವಿಪರ್ಯಾಸವೇ ಸರಿ…..