ಬೆಂಗಳೂರು : ರಾಜ್ಯ ಸಭಾ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದ ದಿನದಂದು ಕಾಂಗ್ರೆಸ್‌ನ ಅಭ್ಯರ್ಥಿ ನಾಸೀರ್ ಆಯ್ಕೆಯಾಗುತ್ತಿದ್ದಂತೆ ಪಾಕ್ ಪರ ಘೋಷಣೆ ಕೂಗಿರುವುದು ಮಾಧ್ಯಮಗಳಲ್ಲಿ ಸ್ಪಷ್ಟವಾಗಿತ್ತು. ಆದರೂ ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಕ್ರೋಶ ಹೊರಹಾಕಿದರು. ಪಾಕ್ ಪರ ಘೋಷಣೆ ಕೂಗಿದ್ದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಎಫ್‌ಎಸ್‌ಎಲ್ ವರದಿ ಬಂದು 4 ದಿನ ಕಳೆದಿದ್ದು, ಘೋಷಣೆ ಕೂಗಿದ್ದು ಸ್ಪಷ್ಟವಾಗಿದೆ. ಆದರೆ, ಮಾಧ್ಯಮಗಳೇ ಇದನ್ನು ಪ್ರಚೋದಿಸುತ್ತಿವೆ ಎಂದು ಸರ್ಕಾರ ದೂರಿತ್ತು. ಪತ್ರಕರ್ತರನ್ನು ಗುರಿ ಮಾಡಿಕೊಂಡು ಕೆಲ ಸಚಿವರು ಮಾತನಾಡಿದ್ದರು. . ಪಾಕ್ ಪರ ಘೋಷಣೆ ಕೂಗಿದ ವರ ಸಮರ್ಥನೆ ಮಾಡಿಕೊಂಡವರು ಈಗ ಕ್ಷಮೆ ಕೇಳಬೇಕೆಂದುಆಗ್ರಹಿಸಿದರು