ಕುಂದಾಪುರ : ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ, ಯುವ ರೆಡ್ ಕ್ರಾಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮವು ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಆಪ್ತ ಸಮಾಲೋಚಕರಾದ ಶ್ರೀಮತಿ ಅರ್ಪಿತಾ ಕಾರ್ಯಕ್ರಮನುದ್ದೇಶಿಸಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವಕರು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಇದರಿಂದ ದೈಹಿಕವಾಗಿ ಮಾನಸಿಕ ಆರೋಗ್ಯ ಹದಗೆಡೆಸುತ್ತದೆ. ಇದರಿಂದ ಜೀವಕ್ಕೆ ಅಪಾಯವಾಗವ ಸಾಧ್ಯತೆಯಿರುವುದರಿಂದ ಮಾದಕ ದ್ರವ್ಯದಿಂದ ದೂರವಿರುವಂತೆ ಅರಿವು ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು
ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕರಾದ ರಾಘವೇಂದ್ರ ಶೆಟ್ಟಿ ಎಸ್. ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಘಟಕದ ಸಂಯೋಜಕರಾದ ಸಂದೀಪ ಕೆ, ಯುವರೆಡ್ ಕ್ರಾಸ್ ಘಟಕ ಸಂಯೋಜಕರಾದ ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಗಾಯಿತ್ರಿ ಕಾರ್ಯಕ್ರಮ ನಿರೂಪಿಸಿದರು. ರಂಜನಿ ವಂದಿಸಿದರು