ಬಸ್ರೂರು :ಬಸ್ರೂರು ಶಾರದಾ ಕಾಲೇಜಿನ ಐ.ಕ್ಯೂ.ಎ.ಸಿ ಘಟಕದ ಆಶ್ರಯದಲ್ಲಿ ಒಂದು ದಿನದ ವಿಶ್ವವಿದ್ಯಾನಿಲಯ ಮಟ್ಟದ ‘ಎಡ್‍ವಾನ್ಸ್ಡ್ ರಿಸರ್ಚ್ ಮೆಥಾಡಾಲಜಿ’ ಎಂಬ ವಿಷಯದ ಕುರಿತು ಕಾರ್ಯಾಗಾರವು ಕಾಲೇಜಿನ ಶ್ರೀ ಬಿ. ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಸಂಚಾಲಕರಾದ ಶ್ರೀ ಬಿ ಅಪ್ಪಣ್ಣ ಹೆಗ್ಡೆ ಇವರು ಇಂದಿನ ವೈಜ್ಞಾನಿಕ ಯುಗದಲ್ಲಿ ಭಾರತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಾ ಬಂದಿದ್ದು ವಿಶ್ವವಿದ್ಯಾನಿಲಯ ಮಟ್ಟದ ಬಾಹ್ಯಕಾಶಕ್ಕೆ ತನ್ನದೇ ಆದ ಕೊಡುಗೆ ನೀಡಿರುತ್ತದೆ. ಈ ಸಂದರ್ಭದಲ್ಲಿ ಸಂಶೋಧನೆಗೆ ಪೂರಕವಾದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇಂದಿನ ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡು ತಮ್ಮ ಅಂತಃಶಕ್ತಿಯನ್ನು ಹೆಚ್ಚಿಸಿಕೊಂಡು ಸಂಶೋಧನೆಗೆ ಪೂರಕವಾದ ಮನೋಪ್ರವೃತ್ತಿ ರೂಡಿಸಿಕೊಳ್ಳಬೇಕೆಂದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಎಂ.ದಿನೇಶ ಹೆಗ್ಡೆ, ಕಾರ್ಯಕ್ರಮ ಉದ್ದೇಶಿಸಿ ಸಮಾಜ ವಿಜ್ಞಾನ ಸಂಶೋಧನೆಯಲ್ಲಿ ಸಾಮಾಜಿಕ ಸ್ಥಿತ್ಯಂತರ ಸನ್ನಿವೇಶದಲ್ಲಿ ಮಹತ್ವ ಪೂರ್ಣ ಪಾತ್ರವನ್ನು ನಿರ್ವಹಿಸುತ್ತಿದೆ. ಈ ಹಿನ್ನಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸರಕಾರ ಉನ್ನತ ಶಿಕ್ಷಣ ಮತ್ತು ಸಂಶೋಧÀನೆಗೆ ಹೆಚ್ಚಿನ ಆಧ್ಯತೆ ನೀಡುತ್ತಿರುವುದು ಹೆಮ್ಮೆಯ ವಿಚಾರ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಇವರು ನಿರ್ವಹಿಸಿದರು. ಕಾರ್ಯಕ್ರಮದ ಸಂಯೋಜಕರಾದ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪುರುಷೋತ್ತಮ ಬಲ್ಯಾಯ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಒಂದು ದಿನದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಡಾ. ಎಂ.ದಿನೇಶ ಹೆಗ್ಡೆ, ಸಮಾಜ ವಿಜ್ಞಾನದಲ್ಲಿ ಸಂಶೋಧನಾ ವಿಧಾನ, ಎಸ್. ಕೆ.ವಿ.ಎಂ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ವೆಂಕಟರಮಣ ಭಟ್ ಇವರು ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ಸಂಶೋಧನಾ ವಿಧಾನ ಮತ್ತು ಎಂ.ಎಸ್.ಆರ್.ಎಸ್ ಕಾಲೇಜು ಶಿರ್ವ ಇದರ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕರಾದ ಡಾ. ಮಿಥುನ್ ಚಕ್ರವರ್ತಿ ಭಾóಷಾ ಅಧ್ಯಯನದಲ್ಲಿ ಸಂಶೋಧನಾ ವಿಧಾನ ಹಾಗೂ ಅಭಿಷೇಕ್ ಬಿ ಇವರು ಸಂಶೋಧನಾ ವಿಧಾನಗಳಲ್ಲಿ ಸಾಫ್ಟ್‍ವೇರ್ ಉಪಕರಣಗಳು ಮತ್ತು ತಂತ್ರಗಳ ಕುರಿತು ವಿಚಾರ ಮಂಡಿಸಿದರು. ಉಪನ್ಯಾಸಕರುಗಳಾದ ರಾಘವೇಂದ್ರ ಶೆಟ್ಟಿ, ಮಮತಾ ಮತ್ತು ಪ್ರಮೀಳಾ ಇವರು ಕಾರ್ಯಕ್ರಮದ