161
ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಗಣದಲ್ಲಿರುವ ಸರಸ್ವತಿ ದೇವರ ಮೂರ್ತಿಗೆ ಪೂಜೆ ಸಲ್ಲಿಸಿ, ಗ್ರಂಥಾಲಯದಲ್ಲಿ ಶಾರದಾ ಪೂಜೆ ಕಾರ್ಯಕ್ರಮವನ್ನು ಭಜನಾ ಕೀರ್ತನೆಯ ಮೂಲಕ ಆಚರಿಸಲಾಯಿತು.ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಶ್ರೀ ಗಿರಿರಾಜ್ ಭಟ್ ಪೂಜೆ ನೆರವೇರಿಸಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ,ಉಪ–ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ,ಮುಖ್ಯ ಗ್ರಂಥಪಾಲಕ ಶ್ರೀ ಮಹೇಶ್ ನಾಯ್ಕ್,ಬೋಧಕ–ಬೋಧಕೇತರ ವರ್ಗದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

