Home » ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಸಿ.ಎ. ಫೈನಲ್‌ನಲ್ಲಿ ತೇರ್ಗಡೆ
 

ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಸಿ.ಎ. ಫೈನಲ್‌ನಲ್ಲಿ ತೇರ್ಗಡೆ

by Kundapur Xpress
Spread the love

ಕುಂದಾಪುರ, ಜೂನ್ 2026: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆ0ಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಸಿ.ಎ. ಫೈನಲ್ ಮೇ 2026ರ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಅವರು ಚೊಚ್ಚಲ ಪ್ರಯತ್ನದಲ್ಲಿಯೇ ಸಿ.ಎ. ಪರೀಕ್ಷೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗುವ ಮೂಲಕ ದಾಖಲೆ ನಿರ್ಮಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಸಿ.ಎ. ಪರೀಕ್ಷೆಯು ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ ಒಂದಾಗಿದ್ದು, ಶ್ರಾವ್ಯ ಅವರ ಈ ಸಾಧನೆಯು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಅವರ ಪರಿಶ್ರಮ, ಸಮರ್ಪಣೆ ಹಾಗೂ ದೃಢ ಸಂಕಲ್ಪಕ್ಕೆ ಈ ಯಶಸ್ಸು ಸಾಕ್ಷಿಯಾಗಿದೆ.
ಅವರ ಈ ಗಮನಾರ್ಹ ಸಾಧನೆಗಾಗಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಉಜ್ವಲ ಭವಿಷ್ಯ ಹಾಗೂ ಯಶಸ್ವಿ ವೃತ್ತಿಜೀವನಕ್ಕಾಗಿ ಶುಭ ಹಾರೈಸಿದ್ದಾರೆ.

 

Related Articles

error: Content is protected !!