ಕುಂದಾಪುರ : 2025-26 ಶೈಕ್ಷಣಿಕ ಸಾಲಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ಮೂಲಕ ಪ್ರಾಕ್ತನ ಯಾನ ಶೀರ್ಷಿಕೆಯಡಿ ಪ್ರಾಕ್ತನ ವಿದ್ಯಾರ್ಥಿಗಳು ಹಾಗೂ ಪ್ರಸಕ್ತ ವಿದ್ಯಾರ್ಥಿಗಳ ಬಾಂಧವ್ಯ ಗಟ್ಟಿಯಾಗಿ ಉಳಿಬೇಕು ಎನ್ನುವ ನಿಟ್ಟಿನಲ್ಲಿ ಪ್ರಾಕ್ತನ ಸಂಘ ಹಾಗೂ ಕಾಲೇಜಿನ ವಾಣಿಜ್ಯ ವಿಭಾಗದ ಜಂಟಿ ಆಶ್ರಯದಲ್ಲಿ ಪ್ರಾಕ್ತನಾ ಯಾನದ ಮೊದಲ ಮಾಲಿಕೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಕಾಲೇಜಿನ 2013–15ನೇ ಸಾಲಿನ ಪ್ರಾಕ್ತನ ವಿದ್ಯಾರ್ಥಿ ಪ್ರಸ್ತುತ ಇನ್ಸೈಟ್ ಸಾಫ್ಟ್ವೇರ್ ಇಂಟರ್ನ್ಯಾಷನಲ್ ಹೈದರಾಬಾದ್ ಇಲ್ಲಿನ ಸೀನಿಯರ್ ಟೆಕ್ನಿಕಲ್ ಕನ್ಸಲ್ಟೆಂಟ್ ಆದ ಶ್ರೀ ದಶರಥ್ ಶೆಟ್ಟಿ ವಿದ್ಯಾರ್ಥಿಗಳ ಅಭಿವೃದ್ಧಿಗೆ ಕೌಶಲ್ಯ ಅಭಿವೃದ್ಧಿ ಹಾಗೂ ಅವರ ಜೀವನ ಅನುಭವವನ್ನು ವಿದ್ಯಾರ್ಥಿಗಳಿಗೆ ಹೇಳಿದರು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ನೂತನ ಪ್ರಾಕ್ತನ ವಿದ್ಯಾರ್ಥಿ ಸಂಘದ ಪರಿಕಲ್ಪನೆಯಲ್ಲಿ ಮೂಡಿ ಬಂದ ಮೊದಲ ಪ್ರಾಕ್ತನ ಯಾನದ ಉದ್ದೇಶ ಹಾಗೂ ಮುಂದಿನ ಚಟುವಟಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ಭಟ್ ಪ್ರಸ್ತಾವಿಸಿದರು. ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಯೋಗೀಶ್ ಶಾನುಭೋಗ್ ಕಾವ್ರಾಡಿ ಸ್ವಾಗತಿಸಿ, ಖಜಾಂಚಿ ಶ್ರೀ ಸಚಿನ್ ವಂದಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷೆ ಜೋಸ್ಲಿನ್ ಅಲ್ಮೇಡಾ, ಜೊತೆ ಕಾರ್ಯದರ್ಶಿ ವಿದ್ಯಾವತಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಸಂಗೀತಾ, ಕ್ರೀಡಾ ಕಾರ್ಯದರ್ಶಿ ದರ್ಶನ್ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

