13
ಕುಂದಾಪುರ : ಟಿಸಿಎಸ್ ಸಂಸ್ಥೆಯು ಮೇ 8ರಂದು ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರದಲ್ಲಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮವನ್ನು ನಡೆಸಿತು. ಮೊದಲ ಸುತ್ತಿನಲ್ಲಿ ಆಯ್ಕೆಯಾದ ಅಂತಿಮ ವರ್ಷದ ಬಿ.ಕಾಂ. ಮತ್ತು ಬಿಬಿಎ ವಿದ್ಯಾರ್ಥಿಗಳು ಭಾಗವಹಿಸಿದರು. ಸಂಸ್ಥೆಯ HR ಅಧಿಕಾರಿ ವಿಷ್ಣು ಅವರು ನೇಮಕಾತಿ ಪ್ರಕ್ರಿಯೆ ಬಗ್ಗೆ ಮಾಹಿತಿಯನ್ನು ನೀಡಿದರು. ಟಿಸಿಎಸ್ ಸಂಸ್ಥೆಯ 30 ಅಧಿಕಾರಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಸಂದರ್ಶನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭಾಶಯವನ್ನು ಕೋರಿದರು.
ಕಾಲೇಜಿನ ಪ್ಲೇಸ್‌ಮೆಂಟ್ ಅಧಿಕಾರಿ ಶ್ರೀ ತಿಮ್ಮಪ್ಪ ಡಿ.ಎಸ್. ಅವರು ಟಿವಿಎಸ್ ಸಂಸ್ಥೆಯ ಅಧಿಕಾರಿಗಳನ್ನು ಸ್ವಾಗತಿಸಿ, ಸಂಯೋಜಕರಾದ ಶ್ರೀ ಮಹೇಶ್ ಕುಮಾರ್ ಅವರು ಧನ್ಯವಾದಗಳನ್ನು ಅರ್ಪಿಸಿದರು.

