ಕುಂದಾಪುರ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಫ್ರೀಡಂ ಪ್ರೆನ್ಯೂರ್ 2026 – ಅಂತರ್ ತರಗತಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಏಕಪಾತ್ರಾಭಿನಯ ಸ್ಪರ್ಧೆಯನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಗಸ್ಟ್ 14 ರಂದು ಹಮ್ಮಿಕೊಳ್ಳಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ, ಕಾರ್ಯಕ್ರಮದ ಸಂಯೋಜಕರಾದ ಶ್ರೀ ರಜತ್ ಬಂಗೇರ ಹಾಗೂ ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ಅವಿತಾ ಕೊರೆಯಾ, ಶ್ರೀ ಹರೀಶ್ ಬಿ. ಹಾಗೂ ತೀರ್ಪುಗಾರರಾಗಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀ ಯೋಗೀಶ್ ಶ್ಯಾನುಭೋಗ್, ಕನ್ನಡ ವಿಭಾಗದ ಪ್ರಾಧ್ಯಾಪಕಿ ಶ್ರೀಮತಿ ರಶ್ಮಿತಾ ಶೆಟ್ಟಿ, ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ಶ್ರೀ ರವಿನಂದನ್ ಎಸ್.ಟಿ. ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ದ್ವಿತೀಯ ಬಿಬಿಎ ವಿದ್ಯಾರ್ಥಿನಿ ನಾಗರತ್ನ ಪ್ರಥಮ ಸ್ಥಾನ, ತೃತೀಯ ಬಿಬಿಎ ವಿದ್ಯಾರ್ಥಿ ಶ್ರೇಯಾ, ದ್ವಿತೀಯ ಬಿ.ಕಾಂ. (ಡಿ) ಹಾಗೂ ತೃತೀಯ ಸ್ಥಾನವನ್ನು ತೃತೀಯ ಬಿ.ಬಿ.ಎ ವಿದ್ಯಾರ್ಥಿ ಪ್ರದೀಪ್ ಹಾಗೂ ಪ್ರಥಮ ಬಿ.ಸಿ.ಎ. (ಸಿ) ವಿದ್ಯಾರ್ಥಿ ಸುಮಂತ್ ಪಡೆದುಕೊಂಡರು.
ಕಾರ್ಯಕ್ರಮದ ಸಂಯೋಜಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

