ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

by Kundapur Xpress
Spread the love

ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2 ಇದರ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 9ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.

ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್. ಸಂಯೋಜನಾಧಿಕಾರಿ ಡಾ। ಶೇಷಪ್ಪ ಅಮೀನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಸಮಾಜದ ಒಳಿತಿಗಾಗಿ ವಿದ್ಯಾರ್ಥಿಗಳು ತಮ್ಮ ಸಮಯ ಮತ್ತು ಶ್ರಮವನ್ನು ವಿನಿಯೋಗಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಉಮೇಶ್ ಶೆಟ್ಟಿ ಮಾತನಾಡಿ, ಎನ್.ಎಸ್.ಎಸ್. ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ಸಮಾಜದ ವಿವಿಧ ಸಮಸ್ಯೆಗಳನ್ನು ಅರಿತುಕೊಂಡು, ಅವುಗಳ ಪರಿಹಾರಕ್ಕಾಗಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು

ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ರಾಜೇಶ್ ಶೆಟ್ಟಿ ವಕ್ವಾಡಿ ಪ್ರಸಕ್ತ ಶೈಕ್ಷಣಿಕ ವರ್ಷದ ಎನ್. ಎಸ್. ಎಸ್ ಘಟಕದ ಕ್ರಿಯಾಯೋಜನೆಗಳ ವರದಿ ಮಂಡಿಸಿದರು.
ಎನ್ಎಸ್ಎಸ್ ಸ್ವಯಂಸೇವಕ ಪ್ರತಿನಿಧಿ ರೋನಿತ್ ಶೆಟ್ಟಿ ಸ್ವಾಗತಿಸಿ, ಪ್ರತೀಕ್ಷಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ರಜತ್ ವಂದಿಸಿದರು. ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

 

Related Articles

error: Content is protected !!