ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವ ಹಕ್ಕುಗಳ ಘಟಕದ ವತಿಯಿಂದ ಮಾನವ ಹಕ್ಕುಗಳು ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಸೆಪ್ಟೆಂಬರ್ 21ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಕುಂದಾಪುರ ಬಾರ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ವಕೀಲರಾದ ಶ್ರೀ ಪಿ. ಜಯಚಂದ್ರ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಮಾನವ ಹಕ್ಕುಗಳ ಮಹತ್ವ, ಸಂವಿಧಾನವು ನಾಗರಿಕರಿಗೆ ನೀಡಿರುವ ಹಕ್ಕುಗಳು ಹಾಗೂ ಕರ್ತವ್ಯಗಳು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಂವಿಧಾನಿಕ ಮೌಲ್ಯಗಳ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭ ಅವರು ವಿದ್ಯಾರ್ಥಿಗಳು ಪ್ರತಿಯೊಬ್ಬರಿಗೂ ಗೌರವಿಸುವ ಮೂಲಕ ಸಂವೇದನಾಶೀಲ ಮಾನವೀಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ ಎಂದರು.
ಸಂಸ್ಥೆಯ ಪ್ರಾಂಶುಪಾಲ ಪ್ರೊ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಮಾನವ ಹಕ್ಕುಗಳ ಘಟಕದ ಸಂಯೋಜಕರಾದ ಶ್ರೀ ಸುಧೀರ್ ಕುಮಾರ್ ಹಾಗೂ ಶ್ರೀ ರೋಹಿತ್ ಕುಮಾರ್ ಶೆಟ್ಟಿ, ಬೋಧಕ-ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅನನ್ಯ ಅಡಿಗ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
