ಕುಂದಾಪುರ : ಕಾಲೇಜು ಆರಂಭಗೊಂಡ ದಿನಗಳಿಂದಲೂ ಕ್ರೀಡೆಗೆ ನಿರಂತರ ಪ್ರೋತ್ಸಾಹ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ದೈಹಿಕ ಸದೃಢತೆಯೊಂದಿಗೆ ಮಾನಸಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಸಹಕಾರಿ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ್ ಶೆಟ್ಟಿ ಹೇಳಿದರು.
ಅವರು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ ನಕ್ಕತ್ತಾಯ ಶುಭ ಹಾರೈಸಿದರು. ಪ್ರಾಂಶುಪಾಲ ಪ್ರೊ| ಡಾ. ಕೆ. ಉಮೇಶ್ ಶೆಟ್ಟಿ ಪ್ರಸ್ತಾವಿಸಿ, ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಂಜಿತ್ ಟಿ. ಎನ್ ಉಪಸ್ಥಿತರಿದ್ದರು.
ಕ್ರೀಡಾ ಕಾರ್ಯದರ್ಶಿ ಆರ್ಯ ಪುತ್ರನ್ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಯೋಗೀಶ್ ಶ್ಯಾನುಭೋಗ್ ವಂದಿಸಿ, ಪೃಥ್ವಿಶ್ರೀ ಜಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಶ್ರೀಶಾಂತ್ ಪ್ರಾರ್ಥಿಸಿದರು.

