72
ಕುಂದಾಪುರ : ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟಿಂಗ್ ಆಫ್ ಇಂಡಿಯಾ ನಡೆಸುವ ಸಿಎಂಎ ಇಂಟರ್‌ಮೀಡಿಯಟ್ ಗ್ರೂಪ್ II, ಡಿಸೆಂಬರ್ 2025ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿಗಳಾದ ಅನುಶ್ರೀ ಹಾಗೂ ಯಶವಂತ ಎನ್. ಉತ್ತೀರ್ಣವಾಗುವ ಮೂಲಕ ಉತ್ಕೃಷ್ಟ ಸಾಧನೆಗೈದಿದ್ದಾರೆ.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.



