Home » ವಿಕಸಿತ ಭಾರತ ಸಂಕಲ್ಪ ಯಾತ್ರೆ
 

ವಿಕಸಿತ ಭಾರತ ಸಂಕಲ್ಪ ಯಾತ್ರೆ

by Kundapur Xpress
Spread the love

ಕುಂದಾಪುರ : ಹಾಲಾಡಿ (76) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಕಾಸಿತ ಭಾರತ ಸಂಕಲ್ಪಯಾತ್ರೆ ಕಾರ್ಯಕ್ರಮ ನೆರವೇರಿತು ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನವನ್ನು
ಹಾಲಾಡಿ (76) ರ ಹಾಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಲಾಯಿತು
ವಿಕಸಿತ ಭಾರತ ಸಂಕಲ್ಪ ಯಾತ್ರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಭಾಷಣ ವೀಕ್ಷಣೆ ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ. ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿ ಮಾತನಾಡಿದರು.ಕೇಂದ್ರ ಸರಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ಪ್ರತಿ ಗ್ರಾಮದ ಎಲ್ಲಾ ನಾಗರೀಕರಿಗೂ ಕಾರ್ಯಕ್ರಮ ಕೊಡಬೇಕು ಎಂಬುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶ ಎಂದು ಹೇಳಿದರು.

ಬಡವರ ಸಂಕಷ್ಟ, ಸಮಸ್ಯೆಗಳನ್ನು ಅರಿತುಕೊಂಡು ಪಿಎಂ ಕೃಷಿ ಸಮ್ಮಾನ್, ಪಿಎಂ ಆವಾಜ್ ಯೋಜನೆ, ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕ ನೀಡಲಾಗಿದೆ ಎಂದರು.ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು ಹಾಗೂ ಇದೆ ವೇಳೆಯಲ್ಲಿ ಆರೋಗ್ಯ ಇಲಾಖೆಯಿಂದ ಗ್ರಾಮಸ್ಥರ ಆರೋಗ್ಯ ತಪಾಸಣೆ ಕೊಡ ನಡೆಸಲಾಯಿತು.

ಸಮಾರಂಭದಲ್ಲಿ ಹಾಲಾಡಿ(76) ಗ್ರಾ.ಪಂ ಅಧ್ಯಕ್ಷರಾದ ಚೋರಾಡಿ ಅಶೋಕ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಜಾನಕಿ, ಹಾಲಾಡಿ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರಾದ ಶ್ರೀನಿವಾಸ್ ಸೇರಿದಂತೆ , ಜಯಪ್ರಕಾಶ್ ಕೆವಿಕೆ ಸೈಂಟಿಸ್ಟ್., ಮೀರಾ ಜಿ ಸೀನಿಯರ್ ಎಫ್.ಎಲ್.ಸಿ. ಉಡುಪಿ, ಸುಜನ್ ಮಾಲ ಆರೋಗ್ಯ ಮಿತ್ರ ಅಧಿಕಾರಿ, ಮಹೇಂದ್ರ U.S. ಅಂಚೆ ಮೇಲ್ವಿಚಾರಕರು,, ಹಾಗೂ ಹಾಲಾಡಿ ಗ್ರಾಮ ಪಂಚಾಯಿತಿ ನ ಸದಸ್ಯರು,ಮತ್ತು ಗ್ರಾಮ ಪಂಚಾಯಿತಿನ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

   

Related Articles

error: Content is protected !!