ಕೋಟ : ಆನಂದ್ ಸಿ ಕುಂದರ್ ರಂತಹ ವ್ಯಕ್ತಿತ್ವ ಸಮಾಜಕ್ಕೆ ಮಾದರಿಯಾಗಿದೆ ಅದೇ ರೀತಿ ಅಂತಹ ವ್ಯಕ್ತಿಗಳ ಹುಟ್ಟುಹಬ್ಬ ಆಚರಿಸುವ ಪಂಚವರ್ಣದ ಕಾರ್ಯ ನಿಜಕ್ಕೂ ಅರ್ಥಪೂರ್ಣವಾಗಿದೆ
ಶುಕ್ರವಾರ ಕೋಟದ ಪಂಚವರ್ಣ ಯುವಕ ಮಂಡಲ ,ಪಂಚವರ್ಣ ಮಹಿಳಾ ಮಂಡಲ ಹಾಗೂ ಸಮುದ್ಯತಾ ಗ್ರೂಪ್ಸ್ ಕೋಟ ಇವರ ಜಂಟಿ ಆಯೋಜನೆಯಲ್ಲಿ ಆನಂದ್ ಸಿ ಕುಂದರ್ 77ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿ ಸಮಾಜದ ಒರೆಕೋರೆಗಳನ್ನು ತಿದ್ದಿ ಅದೆಷ್ಟೋ ಬಡವರ ಕಣ್ಣೀರೊರೆಸುವ ಕುಂದರ್ ಶ್ರೀಮಂತ್ರಿಕೆ ವಿಶೇಷವಾದದ್ದು ಇಂತಹ ಮಹಾನ್ ವ್ಯಕ್ತಿಗಳು ಈ ಸಮಾಜದ ಪರಿವರ್ತನೆಗೆ ಸಹಕಾರಿಯಾಗಲಿದೆ ಎಂದು ಶುಭ ಹಾರೈಸಿದರು.
ಇದೇ ವೇಳೆ ಆನಂದ್ ಸಿ ಕುಂದರ್ ರವರ ಹುಟ್ಟುಹಬ್ಬದ ಅಂಗವಾಗಿ ಉಡುಪಿಯ ಹೊಸಬದುಕು ಆಶ್ರಮಕ್ಕೆ 20 ಚೇರ್,ದಿನಸಿ ಪರಿಕರ,ಹಣ್ಣು ಹಂಪಲುಗಳನ್ನು ಆನಂದ್ ಸಿ ಕುಂದರ್ ಹೊಸಬದುಕು ಆಶ್ರಮದ ಮುಖ್ಯಸ್ಥ ಹ.ರಾ ವಿನಯಚಂದ್ರ ಸಾಸ್ತಾನ ಇವರಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಗೀತಾನಂದ ಫೌಂಡೇಶನ್ ಸಮಾಜಕಾರ್ಯ ವಿಭಾಗದ ರವಿಕಿರಣ್ ಕೋಟ,ಸಮುದ್ಯತಾ ಗ್ರೂಪ್ಸ್ ಕೋಟ ಮುಖ್ಯಸ್ಥ ಯೋಗೇಂದ್ರ ತಿಂಗಳಾಯ,ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಕೋಟ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಅಜಿತ್ ಆಚಾರ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಕಾರ್ಯಕ್ರಮವನ್ನು ಸಂಚಾಲಕಿ ಸುಜಾತ ಬಾಯರಿ ನಿರೂಪಿದರು.ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.

