Categories
ಕರಾವಳಿ ಸುದ್ದಿ

ಕುತ್ಯಾರು ನವೀನ್ ಶೆಟ್ಟಿ ಬಿಜೆಪಿ ಜಿಲ್ಲಾ ಕಛೇರಿಗೆ

ಉಡುಪಿ : ಮುಂಬರಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ ನೇಮಕಗೊಂಡಿರುವ ಕುತ್ಯಾರು ನವೀನ್ ಶೆಟ್ಟಿಯವರು ಬಿಜೆಪಿ ಜಿಲ್ಲಾ ಕಛೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.

ಸಂಘದ ಸ್ವಯಂಸೇವಕರಾಗಿ, ಭಾರತೀಯ ಜನತಾ ಪಾರ್ಟಿಯಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯ ಕಾರ್ಯಕರ್ತರಾಗಿರುವ ಕುತ್ಯಾರು ನವೀನ್ ಶೆಟ್ಟಿಯವರು ಬಿಜೆಪಿ ಕಾಪು ಮಂಡಲ ಯುವ ಮೋರ್ಚಾ ಅಧ್ಯಕ್ಷರಾಗಿ 2 ಬಾರಿ, ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ 2 ಬಾರಿ ಮತ್ತು ಕಾಪು ಕ್ಷೇತ್ರಾಧ್ಯಕ್ಷರಾಗಿ 1 ಅವಧಿಗೆ ಸೇವೆ ಸಲ್ಲಿಸಿ, ಪ್ರಸಕ್ತ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸತತ ಮೂರು ಅವಧಿಗೆ 11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅನೇಕ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ-ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ, ವಿವಿಧ ಸ್ತರದ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರ ಗಿರೀಶ್ ಎಮ್. ಅಂಚನ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ದಿನಕರ ಪೂಜಾರಿ, ರಾಘವೇಂದ್ರ ಕುತ್ಪಾಡಿ ಸಹಿತ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು