ುಡುಪಿ : ಲೋಕಸಭಾ ಚುನಾವಣೆಗೆ ಪೂರಕವಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಮಾವೇಶಗಳನ್ನು ಮಾ.29 ರಿಂದ ಎ5 ರವರೆಗೆ ಹಮ್ಮಿಕೊಂಡಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ ಹೇಳಿದರು. ಅವರು ಬುಧವಾರ ಉಡುಪಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಜಿಲ್ಲೆಯಾದ್ಯಂತ ಬಿಜೆಪಿ ಗೆಲುವಿಗೆ ಪೂರಕ ವಾತಾವರಣವಿದ್ದು ಚುನಾವಣಾ ಅಭ್ಯರ್ಥಿಯ ಜೊತೆಗೆ ಪಕ್ಷದ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬಿರುಸಿನ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.