Home » ಇಂದು ರಾಜ್ಯಾದ್ಯಂತ ರಸ್ತೆ ತಡೆ
 

ಇಂದು ರಾಜ್ಯಾದ್ಯಂತ ರಸ್ತೆ ತಡೆ

by Kundapur Xpress
Spread the love

ಬೆಂಗಳೂರು :  ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿನಿಗಮದ 187 ಕೋಟಿ ರು. ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಶನಿವಾರ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ ಎಂದು ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜ ಹೇಳಿದ್ದಾರೆ. ಶನಿವಾರ ರಾಜ್ಯಾದ್ಯಂತ ರಸ್ತೆ ತಡೆ ನಡೆಸಲಾಗುವುದು. ಸಚಿವ ನಾಗೇಂದ್ರ ಅವರ ಮೌಖಿಕ ಸೂಚನೆ ಮೇರೆಗೆ ಈ ಬೃಹತ್ ಹಗರಣ ನಡೆದಿದೆ. ಅಲ್ಲದೆ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟಿನಲ್ಲೂ ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ. ಆದರೂ, ರಾಜ್ಯ ಸರಕಾರ ಅವರ ರಕ್ಷಣೆಗೆ ನಿಂತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಟೀಕಿಸಿದ್ದಾರೆ

   

Related Articles

error: Content is protected !!