ಕುಂದಾಪುರ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ನಿಮಿತ್ತ ಬಿಜೆಪಿ ಯುವ ಮೋರ್ಚಾ ಕುಂದಾಪುರ ಮಂಡಲ ಆಯೋಜಿಸಿರುವ ‘ಸೇವಾ ಪಾಕ್ಷಿಕ’ದ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಕ್ತ ನಿಧಿ ಘಟಕ ಕುಂದಾಪುರದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು.
ರಕ್ತದಾನ ಶಿಬಿರವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿ.ಮೋದಿ ಅವರು ದೇಶದಲ್ಲಿ ಅಭಿವೃದ್ಧಿಯ ಕ್ರಾಂತಿ ಮಾಡಿದ್ದು ಆಡಳಿತದಲ್ಲಿ ಹಲವು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತವು ಜಗತ್ತಿನ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ’ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಬಿಜೆಪಿ ವತಿಯಿಂದ ಇಡೀ ದೇಶಾದ್ಯಂತ ಸೆ.17 ರಿಂದ ಅ.2ರವರೆಗೆ ಸೇವಾ ಪಾಕ್ಷಿಕ ಅಭಿಯಾನದ ಮೂಲಕ ವಿಶಿಷ್ಟವಾಗಿ ಹುಟ್ಟುಹಬ್ಬವನ್ನ ಆಚರಿಸಲಾಗುತ್ತಿದ್ದು ವಿಶ್ವ ನಾಯಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದು 12 ವರ್ಷಗಳಾಗಿದೆ ಪ್ರಧಾನಿ ನರೇಂದ್ರ ಮೋದಿ ಅವರು ಜನಧನ್ ಯೋಜನೆ, ಕೃಷಿ ಸಮ್ಮಾನ್, ಉಜ್ವಲ ಯೋಜನೆ ಸೇರಿದಂತೆ ಇನ್ನಿತರೆ ಜನಪ್ರಿಯ ಯೋಜನೆಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ದೇಶದ ಜನತೆಗೆ ಉತ್ತಮ ಆಡಳಿತವನ್ನು ನೀಡಿದ್ದಾರೆ. ಇಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಮೋದಿಜಿ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ರಕ್ತದಾನದ ಮೂಲಕ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಯುವ ಮೋರ್ಚ ಕುಂದಾಪುರ ಮಂಡಲ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ ವಹಿಸಿದರು. ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ರಕ್ತದಾನ ಶಿಬಿರದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು, ಸುಧೀರ್.ಕೆ.ಎಸ್. ವಂದನಾರ್ಪಣೆಗೈದರು.
ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಸೇವಾ ಪಾಕ್ಷಿಕ ಅಭಿಯಾನದ ಸಹ ಸಂಚಾಲಕಿ ಸೌರಬಿ ಪೈ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ಖಾರ್ವಿ,ಸಂಪತ್ ಶೇರಿಗಾರ್,ಯುವ ಮೋರ್ಚಾ ಉಪಾಧ್ಯಕ್ಷ ಅಭಯ್ ದೀಕ್ಷಿತ್ ರಕ್ತ ನಿಧಿ ಘಟಕದ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ ಸದಸ್ಯರಾದ ವೈ ಸೀತಾರಾಮಶೆಟ್ಟಿ ಮತ್ತು ಎ.ಮುತ್ತಯ್ಯ ಶೆಟ್ಟಿ ,ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರೋಹಿಣಿ ಪೈ ಹಾಗೂ ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಗಳ ಅಧ್ಯಕ್ಷರು ಪದಾಧಿಕಾರಿಗಳು ಪುರಸಭಾ ಸದಸ್ಯರು, ಪಕ್ಷದ ಮುಖಂಡರು ಉಪಸಿತರಿದ್ದರು. ಇದೇ ಸಂದರ್ಭದಲ್ಲಿ ವಿಶೇಷವಾಗಿ ಮೋದಿಜಿಯವರ 75 ನೆಯ ಹುಟ್ಟು ಹಬ್ಬದ ಪ್ರಯುಕ್ತ 75 ಯೂನಿಟ್ ರಕ್ತ ಸಂಗ್ರಹವವಾಗಿದೆ

