Home » ಜಿಲ್ಲಾ ಬೃಹತ್ ಮಹಿಳಾ ಮೋರ್ಚಾ ಸಮಾವೇಶ
 

ಜಿಲ್ಲಾ ಬೃಹತ್ ಮಹಿಳಾ ಮೋರ್ಚಾ ಸಮಾವೇಶ

by Kundapur Xpress
Spread the love

ಜಿಲ್ಲಾ ಬೃಹತ್ ಮಹಿಳಾ ಮೋರ್ಚಾ ಸಮಾವೇಶ

ಕುಂದಾಪುರ: ಮಹಿಳೆಯರ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಮಹಿಳೆಯ ಸ್ವಾವಲಂಬನೆಗಾಗಿ ಮತ್ತೊಮ್ಮೆ ಡಬಲ್ ಇಂಜೀನ್ ಸರಕಾರದ ಅಗತ್ಯವಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದರು. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಡಬಲ್ ಇಂಜೀನ್ ಸರಕಾರದ ಅಗತ್ಯವಿದ್ದು, ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆಯಲ್ಲಿ ಮನೆ ಮನೆಗೂ ಮುಟ್ಟಿಸುವಲ್ಲಿ ಬಿಜೆಪಿ ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗಬೇಕೆಂದರು. ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿ ನೇತೃತ್ವದಲ್ಲಿ ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ಭಾನುವಾರ ಜರುಗಿದ ಮಹಿಳಾ ಮೋರ್ಚಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.


ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಟಿ ರಾಜ್ಯ ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ದಿಕ್ಸೂಚಿ ಮಾತುಗಳನ್ನಾಡಿದರು. ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಲಾಲಾಜಿ ಆರ್. ಮೆಂಡನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಮಂಗಳೂರು ವಿಭಾಗದ ಪ್ರಭಾರಿ ಉದಯಕುಮಾರ್ ಶೆಟ್ಟಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಸುವರ್ಣ ರಾಜ್ಯ ಆಹಾರ ಸರಬರಾಜು ನಿಗಮದ ಉಪಾಧ್ಯಕ್ಷೆ ನಯನ ಗಣೇಶ್, ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾಜಿ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಭಾಗೀರಥಿ ಮುರುಳ್ಯಾ, ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ ಶಂಕರ್ ಅಂಕದ ಕಟ್ಟೆ ಕುಂದಾಪುರ ಮಂಡಲದ ಪ್ರಭಾರಿ ಸುಪ್ರಸಾದ್ ಶೆಟ್ಟಿ ಕುಂದಾಪುರ ಮಂಡಲದ ಚುನಾವಣಾ ಪ್ರಭಾರಿ ಶ್ಯಾಮಲ ಕುಂದರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಗೀತಾಂಜಲಿ ಎಂ. ಸುವರ್ಣ, ಕುಂದಾಪುರ ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ, ಉಡುಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ವೀಣಾ ವಿ. ನಾಯ್ಕ್, ಬೈಂದೂರು ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ, ಉಡುಪಿ ಗ್ರಾಮಾಂತರ ಮಹಿಳಾ ಮೋರ್ಚಾದ ಅಧ್ಯಕ ವಸಂತಿ ಸತೀಶ್ ಪೂಜಾರಿ, ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸರೋಜಾ ಶೆಟ್ಟಿಗಾರ್, ಕಾಪು ಮಹಿಳಾ ಮೋರ್ಚಾದ ಅಧ್ಯಕ್ಷೆ ಸುಮಾ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ ಅನಿತಾ ಶ್ರೀಧರ್, ಕೋಟೇಶ್ವರ ಪಂಚಾಯತ್‍ನ ಉಪಾಧ್ಯಕ್ಷೆ ರಾಗಿಣಿ ದೇವಾಡಿಗ, ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಲತಾ ಹೆಗ್ಡೆ, ವೀಣಾ ನಾಯ್ಕ್ ಮಾಲಿನಿ ಜಿ. ಶೆಟ್ಟಿ, ವಸಂತಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.


ಈ ಸಂದರ್ಭ ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಮತ್ತು ನಿವೃತ್ತ ಮುಖ್ಯ ಶಿಕ್ಷಕಿ ಇಂದ್ರಾಕ್ಷಿ ಉಡುಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ರೂಪ ಪೈ ವಂದೇ ಮಾತರಂ ಹಾಡಿದರು. ವೀಣಾ ಎಸ್. ಶೆಟ್ಟಿ ಸ್ವಾಗತಿಸಿದರು. ಸೌರಭಿ ಪೈ ವಂದಿಸಿದರು.

   

Related Articles

error: Content is protected !!