Home » ಕಾಂಗ್ರೆಸಿಗರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ
 

ಕಾಂಗ್ರೆಸಿಗರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ

ಕುಯಿಲಾಡಿ ಸುರೇಶ್ ನಾಯಕ್

by Kundapur Xpress
Spread the love

ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ 5 ಉಚಿತಗಳ ಗ್ಯಾರಂಟಿಯನ್ನು ಜಾರಿಗೊಳಿಸುತ್ತೇವೆ ಎಂದು ಪುಂಗಿ ಊದಿದ್ದ ಕಾಂಗ್ರೆಸ್ ಮುಖಂಡರು ಇದೀಗ ಉಲ್ಟಾ ಹೊಡೆದು ಜನತೆಗೆ ನೀಡಿದ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಲು ಹಿಂದೇಟು ಹಾಕುತ್ತಿರುವುದು ಹಾಸ್ಯಾಸ್ಪದ. ಜನರ ತೆರಿಗೆ ಹಣದಿಂದ ಬೇಕಾಬಿಟ್ಟಿ ಉಚಿತಗಳ ಗ್ಯಾರಂಟಿ ಘೋಷಿಸಿ, ಅಧಿಕಾರಕ್ಕೆ ಬಂದು, ಮಾತೆತ್ತಿದರೆ ಉಡಾಫೆ ಉತ್ತರ ನೀಡುವ ಕಾಂಗ್ರೆಸಿಗರಿಗೆ ಜನತೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಗರಿಷ್ಠ ಭರವಸೆಗಳನ್ನು ಈಡೇರಿಸುವ ಜೊತೆಗೆ ಹಲವಾರು ಜನಪ್ರಿಯ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಬಗ್ಗೆ ಜಿಲ್ಲೆಯಲ್ಲಿ ಹೀನಾಯ ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ಸಿನಿಂದ ಬಿಜೆಪಿಗೆ ನೈತಿಕತೆಯ ಪಾಠ ಅನಗತ್ಯ.

ಜನರ ತೆರಿಗೆ ಹಣದಿಂದ ಜಾರಿಗೊಳಿಸಲು ಘೋಷಿಸಿರುವ ಕಾಂಗ್ರೆಸ್ಸಿನ ಉಚಿತ ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಒತ್ತಾಯಿಸಲು ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಹಕ್ಕಿದೆ. ನಿಟ್ಟಿನಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಬಿಜೆಪಿ ತನ್ನ ಕರ್ತವ್ಯವನ್ನು ನಿರ್ವಹಿಸಲಿದೆ. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳ ಜಾರಿಯಲ್ಲಿ ವಿಳಂಬ ಧೋರಣೆ ಅಥವಾ ಮೋಸದ ತಂತ್ರ ಅನುಸರಿಸಿದಲ್ಲಿ ಬಿಜೆಪಿ ಜನತೆಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜನಪರ ಹೋರಾಟಕ್ಕೆ ಸದಾ ಸಿದ್ಧವಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

   

Related Articles

error: Content is protected !!