Home » ಗ್ಯಾರಂಟಿ ವಿಚಾರದಲ್ಲಿ ಜನತೆಗೆ ಮೋಸ
 

ಗ್ಯಾರಂಟಿ ವಿಚಾರದಲ್ಲಿ ಜನತೆಗೆ ಮೋಸ

: ಕುಯಿಲಾಡಿ ಸುರೇಶ್‌ ನಾಯಕ್

by Kundapur Xpress
Spread the love

ಉಡುಪಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ರಾಜ್ಯದ ಬಿಪಿಎಲ್ ಕುಟುಂಬಕ್ಕೆ ಪ್ರತೀ ತಿಂಗಳು 5 ಕೆ.ಜಿ. ಅಕ್ಕಿ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ಮಾಸಿಕ 35 ಕೆ.ಜಿ. ಅಕ್ಕಿಯನ್ನು ಪಡಿತರ ಮೂಲಕ ಉಚಿತವಾಗಿ ವಿತರಿಸುತ್ತಿದೆ. ಆದರೆ ಕಾಂಗ್ರೆಸ್ ಸಹಿತ ಸಿ.ಎಂ. ಸಿದ್ದರಾಮಯ್ಯ ಎಲ್ಲಿಯೂ ಈ ವಿಚಾರವನ್ನು ಪ್ರಚುರಪಡಿಸದೆ ಸತ್ಯವನ್ನು ಮರೆಮಾಚುವ ಕೀಳು ಮನಸ್ಥಿತಿಯ ಮೂಲಕ ಬಡವರ ಅನ್ನದ ವಿಚಾರದಲ್ಲೂ ಹೊಲಸು ರಾಜಕೀಯವನ್ನು ಪ್ರದರ್ಶಿಸಿದೆ. ಕೇವಲ ಅಧಿಕಾರಕ್ಕೇರುವ ಸ್ವಯಂ ಸ್ವಾರ್ಥ ಸಾಧನೆಗಾಗಿ ಘೋಷಿಸಿರುವ ಐದು  ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಲಾಗದೆ ಜನತೆಗೆ ಮೋಸ ಎಸಗಿರುವ ಕಾಂಗ್ರೆಸ್ ಇದೀಗ ಅಕ್ಕಿ ವಿಚಾರದಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸುವ ವಿಫಲ ಯತ್ನಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಚುನಾವಣಾ ಪ್ರಚಾರ ಸಂದರ್ಭದಲ್ಲಿ 200 ಯುನಿಟ್ ವಿದ್ಯುತ್ ‘ನಿನಗೂ ಫ್ರೀ ನನಗೂ ಫ್ರೀ’ ಎಂದು ಡಂಗುರ ಸಾರಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ರವರು ಇದೀಗ ಉಲ್ಟಾ ಹೊಡೆದಿದ್ದಾರೆ. 200 ಯುನಿಟ್ ಬದಲಿಗೆ 1 ವರ್ಷದ ಸರಾಸರಿ ಬಳಕೆ ಎಂದು ಷರತ್ತು ಹಾಕಿರುವ ಕಾಂಗ್ರೆಸ್ ಸರಕಾರ ಭರ್ಜರಿಯಾಗಿ ವಿದ್ಯುತ್ ದರವನ್ನು ಏರಿಸಿ ರಾಜ್ಯದ ಜನತೆಗೆ ಶಾಕ್ ನೀಡುವ ಜೊತೆಗೆ ಪಂಗನಾಮ ಹಾಕಿದೆ.‌

ಕಾಂಗ್ರೆಸ್ಸಿನ ಮೋಸದ ತಂತ್ರದ ಜನ ವಿರೋಧಿ ನೀತಿಗಳಿಂದ ರಾಜ್ಯದ ಜನತೆ ರೋಸಿಹೋಗಿದ್ದು ಮುಂದಿನ ಚುನಾವಣೆಗಳಲ್ಲಿ ಮಾತು ತಪ್ಪಿದ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

   

Related Articles

error: Content is protected !!