Home » ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಡಾ. ವಿ.ಎಸ್. ಆಚಾರ್ಯ ಜನ್ಮ ದಿನಾಚರಣೆ
 

ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಡಾ. ವಿ.ಎಸ್. ಆಚಾರ್ಯ ಜನ್ಮ ದಿನಾಚರಣೆ

by Kundapur Xpress
Spread the love

ಡಾ! ಮುಖರ್ಜಿ, ಡಾ! ಆಚಾರ್ಯ ತತ್ವಾದರ್ಶಗಳು ಕಾರ್ಯಕರ್ತರಿಗೆ ದಾರಿದೀಪ: ಕುಯಿಲಾಡಿ ಸುರೇಶ್ ನಾಯಕ್

ಜಿಲ್ಲಾ ಬಿಜೆಪಿ ವತಿಯಿಂದ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಡಾ! ವಿ.ಎಸ್. ಆಚಾರ್ಯ ಜನ್ಮ ದಿನಾಚರಣೆ

ಭಾರತೀಯ ಜನ ಸಂಘದ ಸಂಸ್ಥಾಪಕರು ಹಾಗೂ ಸ್ವತಂತ್ರ ಭಾರತದ ಪ್ರಥಮ ಕೈಗಾರಿಕಾ ಸಚಿವರಾಗಿದ್ದ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ದಕ್ಷಿಣ ಭಾರತದಲ್ಲಿ ಜನಸಂಘದ ಪ್ರಪ್ರಥಮ ಆಡಳಿತದ ಉಡುಪಿ ಪುರಸಭೆಯ ಅಧ್ಯಕ್ಷರು ಹಾಗೂ ರಾಜ್ಯ ಗೃಹ ಸಚಿವರು, ವೈದ್ಯಕೀಯ, ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ! ವಿ.ಎಸ್. ಆಚಾರ್ಯರವರ ತತ್ವಾದರ್ಶಗಳು ಬಿಜೆಪಿ ಕಾರ್ಯಕರ್ತರಿಗೆ ದಾರಿದೀಪ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಡಾ! ವಿ.ಎಸ್. ಆಚಾರ್ಯರವರ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಬ್ಯಾರಿಸ್ಟರ್ ಪದವೀದರ ಹಾಗೂ ಅತ್ಯಂತ ಮೇಧಾವಿಗಳಾಗಿದ್ದ ಡಾ! ಮುಖರ್ಜಿಯವರು ದೇಶದ ಅಖಂಡತೆಗಾಗಿ ತನ್ನ ಜೀವಿತಾವಧಿಯನ್ನು ಮುಡಿಪಾಗಿಟ್ಟು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ 370ನೇ ವಿಧಿಯನ್ನು ವಿರೋಧಿಸಿ, ನೆಹರೂ ಸಂಪುಟದಿಂದ ನಿರ್ಗಮಿಸಿ, ಕಾಶ್ಮೀರದ ವಿಮೋಚನೆಗೆ ಹೋರಾಟ ನಡೆಸಿ ಹುತಾತ್ಮರಾದರು. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ದಿಟ್ಟ ನಿರ್ಧಾರದಿಂದ ಕಾಶ್ಮೀರಕ್ಕೆ ನೀಡಿದ್ದ 370ನೇ ವಿಧಿ ರದ್ದತಿಗೊಂಡಿರುವುದು ಡಾ! ಮುಖರ್ಜಿಯವರ ಅಂದಿನ ಹೋರಾಟಕ್ಕೆ ಸಂದ ಜಯವಾಗಿದೆ.

ಕಾಂಗ್ರೆಸ್ ದುರಾಡಳಿತದಿಂದ ದೇಶದೆಲ್ಲೆಡೆ ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭದಲ್ಲಿ 19 ತಿಂಗಳ ಸೆರೆಮನೆವಾಸ ಅನುಭವಿಸಿ, ವಿವಿಧ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ, ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ಧಿ, ನವ ಉಡುಪಿಯ ನಿರ್ಮಾತೃ ಡಾ! ವಿ.ಎಸ್. ಆಚಾರ್ಯರವರ ದೂರದರ್ಶಿತ್ವದ ಚಿಂತನೆಗಳು ಇಂದು ಸಾಕಾರಗೊಳ್ಳುತ್ತಿವೆ. ಈ ಮಹಾನ್ ಚೇತನಗಳ ತತ್ವ ಸಿದ್ಧಾಂತಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಕುಯಿಲಾಡಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕಾರ್ಯದರ್ಶಿಗಳಾದ ರೇಶ್ಮಾ ಉದಯ ಶೆಟ್ಟಿ, ನಳಿನಿ ಪ್ರದೀಪ್ ರಾವ್, ಮಾಲತಿ ನಾಯ್ಕ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರ.ಕಾರ್ಯದರ್ಶಿ ಅರುಣ್ ಕುಮಾರ್ ಬಾಣ, ಜಿಲ್ಲಾ ರೈತ ಮೋರ್ಚಾ ಪ್ರ.ಕಾರ್ಯದರ್ಶಿ ಗೋಪಾಲ್ ಕಾಂಚನ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರ.ಕಾರ್ಯದರ್ಶಿ ಆಸಿಫ್ ಕಟಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಅಕ್ಷಯ್ ಶೆಟ್ಟಿ, ಚಂದ್ರಶೇಖರ ಪ್ರಭು, ಬೈಂದೂರು ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರ.ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಕಾರ್ಕಳ ಮಂಡಲ ಪ್ರ.ಕಾರ್ಯದರ್ಶಿ ನವೀನ್ ನಾಯ್ಕ್, ಕಾಪು ಮಂಡಲ ಪ್ರ.ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಉಡುಪಿ ನಗರ ಮಂಡಲ ಪ್ರ.ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ, ದಿನೇಶ್ ಅಮೀನ್, ಉಡುಪಿ ಗ್ರಾಮಾಂತರ ಮಂಡಲ ಪ್ರ. ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ಗಣೇಶ್ ಕುಲಾಲ್ ಮುಂತಾದವರು ಉಪಸ್ಥಿತರಿದ್ದರು

   

Related Articles

error: Content is protected !!