ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಇಂದು ಜುಲೈ 22, ಶನಿವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದ ಬಳಿ ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆ, ಸಂವಿಧಾನ ವಿರೋಧಿ ನೀತಿ, ಹದಗೆಟ್ಟ ಕಾನೂನು ಸುವ್ಯವಸ್ಥೆ, ರೈತರ ಸರಣಿ ಆತ್ಮಹತ್ಯೆ, ಬೆಲೆ ಏರಿಕೆ ವಿರುದ್ದ ಹಾಗೂ ಬೆಂಗಳೂರಿನಲ್ಲಿ ಬಂಧಿತ ಶಂಕಿತ ಭಯೋತ್ಪಾದಕರ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಯಲಿದೆ.