Home » ಸಮಗ್ರ ತನಿಖೆಗೆ ಹಕ್ಕೊತ್ತಾಯ
 

ಸಮಗ್ರ ತನಿಖೆಗೆ ಹಕ್ಕೊತ್ತಾಯ

ಕುಯಿಲಾಡಿ

by Kundapur Xpress
Spread the love

ಉಡುಪಿ: ಉಡುಪಿಯ ನಗರದ ಖಾಸಗಿ ಕಾಲೇಜಿನಲ್ಲಿ ಜಿಹಾದಿ ಮನಸ್ಥಿತಿಯ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣದ ವಿರುದ್ಧ ಜುಲೈ 28, ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ‘ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ’ ನಡೆಯಲಿದೆ.

ಜುಲೈ 28, ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿಯಿಂದ ಹೊರಡಲಿರುವ ‘ಬೃಹತ್ ಪ್ರತಿಭಟನಾ ಮೆರವಣಿಗೆ’ಯು ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಚೇರಿಯ ಬಳಿ ಸಮಾಗಮಗೊಂಡು, ‘ಪ್ರತಿಭಟನಾ ಭಾಷಣ’ದ ಬಳಿಕ ‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸುವಂತೆ ಮನವಿ’ ಸಲ್ಲಿಸುವ ಮೂಲಕ ಸಮಾಪನಗೊಳ್ಳಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಈ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಎಲ್ಲ ಶಾಸಕರು ಪಾಲ್ಗೊಳ್ಳಲಿದ್ದು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಮತ್ತು ಬೂತ್ ಮಟ್ಟದ ಪದಾಧಿಕಾರಿಗಳು, ಎಲ್ಲಾ ಸ್ತರದ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಹಾಗೂ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ

   

Related Articles

error: Content is protected !!