ಉಡುಪಿ: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಮೊಬೈಲ್ ಫೋನ್ ಮೂಲಕ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿದ ಪ್ರಕರಣವನ್ನು ಎಸ್.ಐ.ಟಿ ತನಿಖೆ ನಡೆಸಲು ರಾಜ್ಯ ಸರಕಾರಕ್ಕೆ ಆದೇಶ ನೀಡುವಂತೆ ರಾಜ್ಯಪಾಲರಿಗೆ ಇಂದು ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಯವರು ಉಪಸ್ಥಿತರಿದ್ದರು