ಬೈಂದೂರು : ಬೈಂದೂರು ಶಾಸಕರ ನೂತನ ಕಚೇರಿ – ‘ಕಾರ್ಯಕರ್ತ’ ಚಿತ್ತೂರಿನಲ್ಲಿ ಉದ್ಘಾಟನೆಯೊಂದಿಗೆ ನಾರಾಯಣಗುರು ಜಯಂತಿಯನ್ನು ಆಚರಿಸಲಾಯಿತು ಬೈಂದೂರು ಶಾಸಕರ ನೂತನ ಚಿತ್ತೂರು ಕಚೇರಿ ‘ಕಾರ್ಯಕರ್ತ’ ಜನತಾ ಕಾರ್ಯಾಲಯ ವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಭಾರತ್ ಮಾತೆ ಮತ್ತು ನಾರಾಯಣ ಗುರು ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಉದ್ಘಾಟಿಸಿದ್ದು ವಿಶೇಷವಾಗಿತ್ತು.
ಗ್ರಾಮಗಳ ಅಭಿವೃದ್ಧಿಯೇ ನಮ್ಮ ಉದ್ದೇಶ ಹಾಗಾಗಿ ಗ್ರಾಮೀಣ ಪ್ರದೇಶದಲ್ಲಿ ಕಚೇರಿಯನ್ನು ತೆರೆದಿದ್ದೇವೆ, ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಈ ಭಾಗಕ್ಕೆ ಭೇಟಿ ನೀಡುವುದಾಗಿ ಭರವಸೆಯನ್ನು ನೀಡಿದರು. ಜನರು ಈ ಕಚೇರಿಯನ್ನು ಸದುಪಯೋಗಪಡಿಸಿಕೊಳ್ಳಬೇಕು, ಯಾವುದೇ ಸಮಸ್ಯೆಗಳಿದ್ದರು ಇಲ್ಲಿಗೆ ಆಗಮಿಸಿ ತಿಳಿಸಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಡಾಕ್ಟರ್ ಅತುಲ್ ಕುಮಾರ್ ಶೆಟ್ಟಿ, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ, ಶಕ್ತಿ ಕೇಂದ್ರದ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ ನಾರ್ಕಳಿ, ಇಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಶಾ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹರ್ಕೂರು ಮಂಜಯ್ಯ ಶೆಟ್ಟಿ, ಚಿತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಬ್ಬಕ್ಕ, ಮತ್ತು ಪಕ್ಷದ ಪ್ರಮುಖರು ವಿವಿಧ ಮೋರ್ಚಾಗಳ ಅಧ್ಯಕ್ಷರು, ಸ್ಥಳಿಯರು ಉಪಸ್ಥಿತರಿದ್ದರು.