ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ, ದೇಶದ ನೂತನ ಸಂಸತ್ ಭವನ ‘ಕರ್ತವ್ಯ ಪಥ’ದ ಬಳಿ ‘ಅಮೃತ ಉದ್ಯಾನವನ’ ನಿರ್ಮಾಣ ಕಾರ್ಯಕ್ಕೆ ದೇಶದಾದ್ಯಂತ ಎಲ್ಲ ಗ್ರಾಮಗಳಿಂದ ಶೃದ್ಧಾಪೂರ್ವಕ ಮಣ್ಣು ಸಂಗ್ರಹದ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಸಜ್ಜಾಗಿದ್ದು, ಸೆ.24, ರವಿವಾರ ಬೆಳಿಗ್ಗೆ 10.00 ಗಂಟೆಗೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ವಿವಿಧ ಅಭಿಯಾನಗಳ ಕುರಿತು ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲೆಯ ಎಲ್ಲ ಗ್ರಾಮಗಳಿಂದ ಗ್ರಾ.ಪಂ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇತೃತ್ವದಲ್ಲಿ ಮಣ್ಣನ್ನು ಸಂಗ್ರಹಿಸಿ, ಮಂಡಲವಾರು ಹಾಗೂ ಜಿಲ್ಲೆಯ ಮೂಲಕ ರಾಜ್ಯಕ್ಕೆ ಕಳುಹಿಸಲಾಗುವುದು. ಸೆ.24ರಂದು ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಭಿಯಾನಕ್ಕೆ ಚಾಲನೆ ದೊರೆತ ಬಳಿಕ ಮಣ್ಣು ಸಂಗ್ರಹಿಸುವ ಅಮೃತ
ಕಳಸಗಳನ್ನು ಮೆರವಣೆಗೆ ಮೂಲಕ ಬಿಜೆಪಿ ಜಿಲ್ಲಾ ಕಛೇರಿಗೆ ತರಲಾಗುವುದು. ಬೆಳಿಗ್ಗೆ 10.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯುವ ಸಭೆಯಲ್ಲಿ ಅಮೃತ ಕಳಸಗಳನ್ನು ವಿತರಿಸುವ ಜೊತೆಗೆ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಜೆಪಿ ಬೆಂಬಲಿತ ಗ್ರಾ.ಪಂ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಪಕ್ಷದ ವತಿಯಿಂದ ಗೌರವಿಸಲಾಗುವುದು ಎಂದು ಅವರು ತಿಳಿಸಿದರು.
‘ನನ್ನ ಮಣ್ಣು ನನ್ನ ದೇಶ’ ಅಭಿಯಾನದ ಜಿಲ್ಲಾ ಸಂಯೋಜಕ ಸುಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಅಭಿಯಾನದ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ‘ಸೇವಾ ಪಾಕ್ಷಿಕ ಅಭಿಯಾನ’ದ ಜಿಲ್ಲಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ‘ಸೇವಾ ಪಾಕ್ಷಿಕ ಅಭಿಯಾನ’ದ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜಾ, ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠದ ಸಂಚಾಲಕ ಪಾಂಡುರಂಗ ಲಾಗ್ವಾಂಕರ್, ಬಿಜೆಪಿ ಕಾಪು ಮಂಡಲ ಉಪಾಧ್ಯಕ್ಷ ನವೀನ್ ಎಸ್.ಕೆ., ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ನಿತಿನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು