293
ಉಡುಪಿ : ದೇಶದಾದ್ಯಂತ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢದಲ್ಲಿ ಬಿಜೆಪಿಯ ಭರ್ಜರಿ ಗೆಲುವಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಬಿಂಬಿಸಲ್ಪಟ್ಟ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಜಯಭೇರಿ ಬಾರಿಸಿರುವುದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು

