ಬೆಂಗಳೂರು : ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಂಡಿರುವ ರಾಜ್ಯ ಬಿಜೆಪಿ ಫೆ. 3ರಿಂದ ಮೂರು ದಿನಗಳ ಕಾಲ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕಾರಿಣಿ ಸಭೆ ಹಾಗೂ ಫೆಬ್ರವರಿಯಲ್ಲಿ ‘ನಾರಿ ಶಕ್ತಿ ವಂದನಾ’ ಸಮಾವೇಶಗಳನ್ನು ನಡೆಸುವ ತೀರ್ಮಾನವನ್ನು ಕೈಗೊಂಡಿದೆ. ಶನಿವಾರ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ
ಇದೇ ವೇಳೆ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಪ್ರಾಣ ಪ್ರತಿಷ್ಠಾಪನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವುದು ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ, ದಲಿತ ವಿರೋಧಿನೀತಿಯನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಲಾಗಿದೆ. ಶಾಸಕ ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಪ್ರಥಮ ಕಾರ್ಯಕಾರಿಣಿ ಸಭೆ ನಡೆದಿದೆ