ಬೆಂಗಳೂರು : ನಮ್ಮ ಮುಂದಿರುವ ಗುರಿ ಲೋಕಸಭಾ ಚುನಾವಣೆ. ಅದು ಮುಗಿಯುವವರೆಗೂ ನಾವು ವಿಶ್ರಾಂತಿ ಪಡೆಯುವ ಮನೆಯಲ್ಲಿ ಕುಳಿತುಕೊಳ್ಳುವ ಸಂದರ್ಭ ಉದ್ಭವಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದ ಅರಮನೆ ಮೈದಾನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯ * ಕಾರ್ಯಕ್ರಮದಲ್ಲಿ ಅವರು ಮಾತನಾಡಿ ನಮ್ಮ ಎದುರಾಳಿಗಳನ್ನು ಹಗುರವಾಗಿ ತೆಗೆದುಕೊಳ್ಳದೆ, ನಮ್ಮ ಸಾಧನೆಗಳನ್ನು ಜನರ ಮುಂದಿಟ್ಟು ಹಗಲು ರಾತ್ರಿ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕು ಎಂದರು
ಕಳೆದ ಒಂಬತ್ತುವರೆ ವರ್ಷಗಳಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ಕೊಡದೆ ಉತ್ತಮ ಆಡಳಿತ ಕೊಟ್ಟಿದೆ ಜೊತೆಗೆ ಈ ದೇಶವನ್ನು ಜಗತ್ತಿನ ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿ ತೆಗೆದುಕೊಂಡು ಹೋಗುವ ಕೆಲಸ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆಗುತ್ತಿದೆ. ಒಂದು ದಿನವೂ ವಿಶ್ರಾಂತಿ ತೆಗೆದುಕೊಳ್ಳದೆ ಅವರು ದೇಶದ ಎಲ್ಲ ಕ್ಷೇತ್ರ ಗಳಲ್ಲಿ ಅಭಿವೃದ್ಧಿ ಮಾಡಿದ್ದಾರೆ. ಈ ಮೂಲಕ ಭಾರತವನ್ನು ಮುನ್ನಡೆಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರಿಂದ ಕಾರ್ಯಕರ್ತರಿಗಾಗಿ ಕಾರ್ಯ ಕರ್ತರಿಗೋಸ್ಕರ ಇರುವ ಪಕ್ಷ ಎಂದು ವಿವರಿಸಿದರು