ಬೆಂಗಳೂರು : ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕೆ.ಆರ್.ಪಿ.ಪಿ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಪಕ್ಷಕ್ಕೆ ಮರಳಿದ ಜನಪ್ರಿಯ ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಗಾಲಿ ಜನಾರ್ದನ ರೆಡ್ಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು
ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ B S ಯಡಿಯೂರಪ್ಪ ಕರ್ನಾಟಕ ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಶ್ರೀ ಸುಧಾಕರ್ ರೆಡ್ಡಿ, ಮಾಜಿ ಸಚಿವರಾದ ಶ್ರೀ C T ರವಿ ಬಳ್ಳಾರಿ ಲೋಕಸಭಾ ಅಭ್ಯರ್ಥಿ ಶ್ರೀ B ಶ್ರೀರಾಮುಲು ಸಂಸದರಾದ ಶ್ರೀ P C ಮೋಹನ್ ಮಾಜಿ ಸಚಿವರಾದ ಶ್ರೀ ಆನಂದ್ ಸಿಂಗ್, ಸಂಸದರಾದ ಶ್ರೀ ದೇವೇಂದ್ರಪ್ಪ, ಕೊಪ್ಪಳ ಜಿಲ್ಲಾಧ್ಯಕ್ಷರಾದ ಶ್ರೀ ನವೀನ್, ಮಾಜಿ ಸಚಿವರಾದ ಶ್ರೀ ಎಸ್.ಕೆ.ಬೆಳ್ಳುಬ್ಬಿ, ಶ್ರೀಮತಿ ಅರುಣಾ ಲಕ್ಷ್ಮಿ, ಡಾ.ಥಾಮಸ್, ಸೇರಿದಂತೆ ಮುಖಂಡರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.