Home » ಜಿಲ್ಲಾ ಬಿಜೆಪಿ ಕಚೇರಿಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ
 

ಜಿಲ್ಲಾ ಬಿಜೆಪಿ ಕಚೇರಿಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

by Kundapur Xpress
Spread the love

ಉಡುಪಿ : ಗುಂಡಿ ಬೈಲು ಅಂಬಾಗಿಲು ರಸ್ತೆಯ ಟಾಟಾ ಶೋರೂಮ್ ಹತ್ತಿರ ಭಾರತೀಯ ಜನತಾ ಪಾರ್ಟಿ, ಉಡುಪಿ ಜಿಲ್ಲೆ ಇದರ ಜಿಲ್ಲಾ ಕಚೇರಿಯ ನೂತನ ಕಟ್ಟಡದ ಶಿಲಾನ್ಯಾಸ ಹಾಗೂ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದ್ದು
ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್ ಸಂತೋಷ್ ಜೀ ಅವರು ಕಟ್ಟಡ ಶಿಲಾನ್ಯಾಸ ನೆರವೇರಿಸಿ ಕಾರ್ಯಕರ್ತರನ್ನು ಉದ್ದೇಶಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಕಾರ್ಯಕ್ರಮದ ಗೌರವ ಅತಿಥಿಯಾಗಿ ಭಾಗವಹಿಸಿದರುಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆ ಹಾಗೂ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

 

Related Articles

error: Content is protected !!