ಉಡುಪಿ : ಬಿಜೆಪಿ ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗ ಮಟ್ಟದ ಪುರಸಭೆ, ಪಟ್ಟಣ ಪಂಚಾಯತ್ ಸದಸ್ಯರುಗಳ ‘ಪ್ರಶಿಕ್ಷಣ ವರ್ಗ‘ ನ.22ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ಬೆಳಿಗ್ಗೆ ಗಂಟೆ 10.00 ರಿoದ ಸಂಜೆ 5.00ರ ವರೆಗೆ ನಡೆಯಲಿದೆ. ಪಕ್ಷದ ಪ್ರಮುಖರು ಮತ್ತು ಪದಾಧಿಕಾರಿಗಳು ಪ್ರಶಿಕ್ಷಣ ವರ್ಗದ ವ್ಯವಸ್ಥಿತ ಸಂಯೋಜನೆಗೆ ಬದ್ದತೆಯಿಂದ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಮಂಗಳೂರು ವಿಭಾಗ ಮಟ್ಟದ ಪುರಸಭೆ, ಪಟ್ಟಣ ಪಂಚಾಯತ್ ಸದಸ್ಯರುಗಳ ಪ್ರಶಿಕ್ಷಣ ವರ್ಗದ ಸಂಚಾಲನಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರವರು ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ನಾಲ್ಕು ಅವಧಿಯಲ್ಲಿ ಪ್ರಶಿಕ್ಷಣ ವರ್ಗ ನಡೆಯಲಿದ್ದು, ಸಮಾರೋಪ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲಾ ಬಿಜೆಪಿ ಆತಿಥ್ಯದಲ್ಲಿ ನಡೆಯಲಿರುವ ಪ್ರಶಿಕ್ಷಣ ವರ್ಗದ ಯಶಸ್ಸಿಗೆ ನಿಗದಿತ ಜವಾಬ್ದಾರಿಗಳನ್ನು ಹೊಂದಿರುವ ಪಕ್ಷದ ಪದಾಧಿಕಾರಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಯ ಅಮೀನ್, ಪ್ರಶಿಕ್ಷಣ ವರ್ಗದ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕ ರಘುವೀರ್ ಶೆಣೈ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಅನಿತಾ ಶ್ರೀಧರ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಹ ಸಂಚಾಲಕ ಡಾ! ವಿದ್ಯಾಧರ ಶೆಟ್ಟಿ ಕೆ., ಬಿಜೆಪಿ ಉಡುಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಉಡುಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಕಾರ್ಯಾಲಯ ಪ್ರಮುಖರಾದ ಶಿವರಾಮ್ ಕಾಡಿಮಾರ್, ಚಂದ್ರಶೇಖರ ಪ್ರಭು ಮುಂತಾದವರು ಉಪಸ್ಥಿತರಿದ್ದರು