ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಐದಕ್ಕೆ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ರಾಜ್ಯಕ್ಕೆ ಮಾದರಿ ಜಿಲ್ಲೆ ಎಂದು ಎನಿಸಿಕೊಂಡಿದೆ ಕಳೆದ ಬಾರಿಯಂತೆ ಈ ಭಾರಿಯೂ ಕೂಡ ಐದು ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವ ಮೂಲಕ ಭಾರತೀಯ ಜನತಾ ಪಾರ್ಟಿಯು ತನ್ನ ಘನತೆಯನ್ನು ಹೆಚ್ಚಿಸಿಕೊಂಡಿದ್ದು ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಹಿಂದುತ್ವದ ಅಲೆ ಇನ್ನೂ ಇದೆ ಎಂದು ತೋರಿಸಿಕೊಟ್ಟಿದೆ ಈ ಬಾರಿಯ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯೊಂದಿಗೆ ಸಂಘ ಪರಿವಾರದ ಪ್ರಮುಖ ಸಂಘಟನೆಗಳು ಕೆಲಸ ಮಾಡುವುದರ ಮೂಲಕ ಈ ಫಲಿತಾಂಶ ಬಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ