ಕುಂದಾಪುರ : ಕುಂದಾಪುರದ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಸುದೀರ್ಘ 7 ವರ್ಷಗಳ ಕಾಲ ನಿಸ್ವಾರ್ಥ ಸೇವೆ ಸಲ್ಲಿಸಿದ ಕು. ಶಾಂಭವಿ ಮೊಗವೀರ ಅವರ ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇದೀಗ ವಿವಾಹದ ಕಾರಣ ಸೇವೆಯಿಂದ ಮುಕ್ತಿ ಹೊಂದಲಿರುವ ಇವರಿಗೆ ಮುಂದಿನ ವೈವಾಹಿಕ ಜೀವನ ಉತ್ತಮವಾಗಿರಲಿ ಎಂದು ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಹಾರೈಸಿದರು
ಬಿಜೆಪಿ ಕ್ಷೇತ್ರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್.ಕೆ.ಎಸ್ .ಶಾಲು ಹೊದಿಸಿ, ಫಲ ಪುಷ್ಪ ನೀಡಿ. ಗೌರವಿಸಿ ಕೃತಜ್ಞಾ ಪೂರ್ವಕವಾಗಿ ಅಭಿನಂದಿಸಿದರು