ಕುಂದಾಪುರ : ಬಾಬಾಸಾಹೇಬ್ ಅಂಬೇಡ್ಕರ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಬಿ.ಆರ್ ಅಂಬೇಡ್ಕರ್ ಅವರು ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಸಮಾಜ ಸುಧಾರಕರಾಗಿದ್ದರು,,ಭಾರತದ ಸಂವಿಧಾನದ ಪ್ರಮುಖ ವಾಸ್ತುಶಿಲ್ಪಿ, ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳು ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಪ್ರತಿಪಾದಿಸಿದರು.
ಸ್ವತಂತ್ರ ಭಾರತದ ಮೊದಲ ಕಾನೂನು ಮತ್ತು ನ್ಯಾಯ ಮಂತ್ರಿ ಎಂದು ಗುರುತಿಸಲ್ಪಟ್ಟಿರುವ ಅಂಬೇಡ್ಕರ್ ಅವರು ಭಾರತದ ಗಣರಾಜ್ಯದ ಸಂಪೂರ್ಣ ಪರಿಕಲ್ಪನೆಯನ್ನು ನಿರ್ಮಿಸಲು ನೀಡಿದ ಕೊಡುಗೆ ಅಪಾರವಾಗಿದೆ. ದೇಶಕ್ಕೆ ಅವರ ಕೊಡುಗೆ ಮತ್ತು ಸೇವೆಯನ್ನು ಗೌರವಿಸವ ಸಲುವಾಗಿ, ಅವರ ಜನ್ಮದಿನವನ್ನು ಪ್ರತಿ ವರ್ಷ ಏಪ್ರಿಲ್ 14 ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಎಂದೇ ಆಚರಿಸಲಾಗುತ್ತದೆ. ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ,,ಸುಧೀರ್ ಕೆ.ಎಸ್,, ಕುಂದಾಪುರ ಮಂಡಲ ಬಿಜೆಪಿ ಎಸ್.ಸಿ.ಮೋರ್ಚಾದ ಅಧ್ಯಕ್ಷ ಮಂಜುನಾಥ್ ಬಳ್ಕೂರು, ಪ್ರಧಾನ ಕಾರ್ಯದರ್ಶಿ ಮಹೇಶ್, ಉಪಾಧ್ಯಕ್ಷ ಕುಮಾರ್ ಟಿಟಿ ರಸ್ತೆ ,, ನಿತ್ಯಾನಂದ ಕಾಳವರ, ನರಸಿಂಹ ತೆಕ್ಕಟ್ಟೆ,,ಕಾರ್ಯದರ್ಶಿ ಪ್ರದೀಪ್,, ಹಾಗೂ ಕುಂದಾಪುರ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್,ಪ್ರಧಾನ ಕಾರ್ಯದರ್ಶಿ ಸುಧೀರ್ ಪೂಜಾರಿ, ನಾಗರಾಜಾ ಆಚಾರ್ಯ, ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸುನೀಲ್ ಖಾರ್ವಿ,,ಮಹಿಳಾ ಮೋರ್ಚಾದ ಅಧ್ಯಕ್ಷೆ ಸೌರಭಿ ಪೈ, ಕುಂದಾಪುರ ಮಂಡಲ ಕಾರ್ಯದರ್ಶಿ ನೇತ್ರಾವತಿ, ವಿವಿಧ ಮೋರ್ಚಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.