ಉಡುಪಿ: ರಾಜ್ಯ ಸರ್ಕಾರದ ಪೆಟ್ರೋಲ್ ಮತ್ತು ಡಿಸೇಲ್ ದರದ ಏರಿಕೆ ವಿರುದ್ದ ಕುಂದಾಪುರ ಭಾರತೀಯ ಜನತಾ ಪಾರ್ಟಿ ವತಿಯಿಂದ ಇಂದು ಕುಂದಾಪುರ ಶಾಸ್ತ್ರೀ ವೃತ್ತದ ಬಳಿ ಸಂಜೆ 4.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ಶಾಸಕರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪಕ್ಷದ ಪದಾಧಿ ಕಾರಿಗಳು ಭಾಗವಹಿಸಲಿದ್ದಾರೆ ಎಂದು ಕುಂದಾಪುರ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.