ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚಿನ ನೊಂದಾವಣಿಯಾಗಬೇಕು ಈ ಮೂಲಕ ಈ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಬೇಕೆಂದು ಕುಂದಾಪುರದ ಬಿಜೆಪಿಯ ಕಚೇರಿಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿಯವರು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿ ಸದಸ್ಯತ್ವ ಅಭಿಯಾನವು ಸೆಪ್ಟೆಂಬರ್ 2ರಿಂದ ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಿಂದ 15ರವರೆಗೆ ಎರಡು ಹಂತಗಳಲ್ಲಿ ಬಿಜೆಪಿ ಅಭಿಯಾನ ನಡೆಯಲಿದೆ ಎಂದರು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಅಭಿಯಾನಕ್ಕೆ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಹಾಗೂ ನಮ್ಮ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರು ಸದಸ್ಯತ್ವ ಪಡೆಯುವ ಮೂಲಕ ರಾಷ್ಟ್ರದಂತ ಸದಸ್ಯ ಅಭಿಯಾನಕ್ಕೆ ಚಾಲನೆ ನೀಡಿದ್ದು. ಎಲ್ಲರೂ ಕೂಡ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಪ್ರಸ್ತಾವಿಕ ಮಾತುಗಳನ್ನಾಡಿದರು.
ಇದೇ ಸಂದರ್ಭದಲ್ಲಿ, ಪಕ್ಷದ ವಿವಿಧ ಜವಾಬ್ದಾರಿಯ ಪದಾಧಿಕಾರಿಗಳು. ಬಿಜೆಪಿಯ ಕಚೇರಿಯಲ್ಲಿ ತಮ್ಮ ತಮ್ಮ ಮೊಬೈಲ್ಗಳ ಮೂಲಕ ಸದಸ್ಯತ್ವ ನೋಂದಾವಣೆ ಮಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷರಾದ ಶಂಕರ್ ಅಂಕದಕಟ್ಟೆ,ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಕ್ವಾಡಿ ಸುಧೀರ್.ಕೆ.ಎಸ್, ಜಿಲ್ಲಾ ಉಪಾಧ್ಯಕ್ಷರು ಬಿಜೆಪಿ ಸದಸ್ಯತ್ವ ಅಭಿಯಾನದ ಕುಂದಾಪುರ ಮಂಡಲ ಸಂಚಾಲಕರಾದ ಕಾಡೂರು ಸುರೇಶ್ ಶೆಟ್ಟಿ,ಸಹ ಸಂಚಾಲಕರಾದ ರೂಪಾ ಪೈ, ರಾಜೇಶ್ ಶೆಟ್ಟಿ, ಮಂಗಳೂರು ಸಹ ಪ್ರಭಾರಿ ರಾಜೇಶ್ ಕಾವೇರಿ, ಕುಂದಾಪುರ ಪುರಸಭೆಯ ಅಧ್ಯಕ್ಷರಾದ ಮೋಹನ್ ದಾಸ್ ಶೆಣೈ ,ಪುರಸಭೆಯ ಉಪಾಧ್ಯಕ್ಷೆ ಶ್ರೀಮತಿ ವನಿತಾ ಬಿಲ್ಲವ ಹಾಗೂ ಮಂಡಲದ ಪದಾಧಿಕಾರಿಗಳು,ಮತ್ತು ಬಿಜೆಪಿ ಕುಂದಾಪುರ ಮಂಡಲದ ವಿವಿಧ ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳು,ಪುರಸಭೆಯ ಸದಸ್ಯರು,ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.