Home ಕರಾವಳಿ ಸುದ್ದಿಆತ್ಮ ನಿರ್ಭರ ಭಾರತ್ ಬಗ್ಗೆ ಕ್ಷೇತ್ರದ ಜನರಿಗೆ ತಿಳಿಸಿ

ಆತ್ಮ ನಿರ್ಭರ ಭಾರತ್ ಬಗ್ಗೆ ಕ್ಷೇತ್ರದ ಜನರಿಗೆ ತಿಳಿಸಿ

ಶಾಸಕ ಎ.ಕಿರಣ್ ಕೊಡ್ಗಿ

by Kundapur Xpress

ಕುಂದಾಪುರ :ಆತ್ಮ ನಿರ್ಭರ ಭಾರತದ ಸಂಕಲ್ಪದ ಎಲ್ಲ ಕಾರ್ಯಕ್ರಮಗಳನ್ನು ಸವಿಸ್ತಾರವಾಗಿ ಯೋಜನಾ ಬದ್ಧವಾಗಿ 90 ದಿನದಲ್ಲಿ ಎಲ್ಲಾ ಚಟುವಟಿಕೆಗಳನ್ನು ಮಾಡಿ ಕ್ಷೇತ್ರದಲ್ಲಿ ಆತ್ಮ ನಿರ್ಭರ ಭಾರತದ ಬಗ್ಗೆ ಜನರಿಗೆ ಮುಟ್ಟುವ ರೀತಿಯಲ್ಲಿ ಕಾರ್ಯಕ್ರಮ ಮಾಡಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ಆತ್ಮ ನಿರ್ಭರ ಭಾರತ್ ಸಂಕಲ್ಪ ಅಭಿಯಾನದ ಕಾರ್ಯಗಾರದ ಮೂಲಕ ಚಾಲನೆ ನೀಡಿ ಶಾಸಕರು ಮಾತನಾಡಿದರು.

ಸೆಪ್ಟೆಂಬರ್ 25 ರಂದು ದೀನ್ ದಯಾಳ್ ಉಪಾಧ್ಯಾಯರ ಈ ಕಾರ್ಯಕ್ರಮ ಆರಂಭಗೊಂಡು ಈ ಸಂಕಲ್ಪದ ಅವಧಿ ಡಿಸೆಂಬರ್ 25 ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯ ತನಕ ಸುಧೀರ್ಘ 90 ದಿನ ಸನ್ಮಾನ್ಯ ದೇಶದ ಪ್ರಧಾನ ಮಂತ್ರಿಗಳ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಿ ಜನರಿಗೆ ತಿಳಿಸಬೇಕಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಆತ್ಮ ನಿರ್ಭರ ಭಾರತ್ ಕುಂದಾಪುರ ಮಂಡಲ ಸಂಚಾಲಕ ಸುನಿಲ್ ಶೆಟ್ಟಿ ಹೇರಿಕುದ್ರು ಪ್ರಾಸ್ತಾವಿಕ ಮಾತುಗಳಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಮಂಡಲ ಕ್ಷೇತ್ರ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿ ಸಮಗ್ರ ಆತ್ಮ ನಿರ್ಭರ ಭಾರತ್ ದ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಮಾತನಾಡಿದರು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು. ಸುಧೀರ್ ಕೆ.ಎಸ್ ವಂದನಾರ್ಪಣೆ ಸಲ್ಲಿಸಿದರು. ಕುಂದಾಪುರ ಮಂಡಲ ಆತ್ಮ ನಿರ್ಭರ ಭಾರತ್ ಸಂಚಾಲಕಿ ಶ್ರೀಮತಿ ರೂಪಾ ಪೈ ವಂದೇ ಮಾತರಂ ಗೀತೆ ಹಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸಂಧ್ಯಾ ರಮೇಶ್, ಉಡುಪಿ ಜಿಲ್ಲಾ ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ,, ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ,,ಆತ್ಮ ನಿರ್ಭರ ಭಾರತ್ ಸಹ ಸಂಚಾಲಕ ರಾಜೇಶ್ ಶೆಟ್ಟಿ ಶಿರೂರು ಮುರ್ಕೈ ಮತ್ತು ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related Articles