ಬಿಜೆಪಿ ಜಿಲ್ಲಾ ಪ್ರಥಮ ವಿಶೇಷ ಕಾರ್ಯಕಾರಿಣಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಉಡುಪಿ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆಯಿತು. ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರಕಾರದ ಸಾಧನೆಗಳು, ರಾಜ್ಯ ಸರಕಾರದ ಆಡಳಿತ ವೈಫಲ್ಯ ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಕುರಿತು ಸವಿಸ್ತಾರ ಮಾಹಿತಿ ನೀಡಿದರು
ಪಕ್ಷದ ಹಿರಿಯ ನಾಯಕರಾದ ಸೋಮಶೇಖರ ಭಟ್, ಬಿ.ಸುಧಾಕರ ಶೆಟ್ಟಿ, ಸಂಘದ ಹಿರಿಯರಾದ ಗೋಪಾಲ ಚೆಟ್ಟಿಯಾರ್ ಮಂಗಳೂರು ಹಾಗೂ ಪ್ರೇಮ ಪಡಿಯಾರ್ ಇವರ ನಿಧನದ ಬಗ್ಗೆ ಮೌನ ಪ್ರಾರ್ಥನೆಯೊಂದಿಗೆ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಅಗಲಿದ ಗಣ್ಯರ ಕುರಿತು ಮಾಹಿತಿ ನೀಡಿದರು. ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಮಾತನಾಡಿ ಪಕ್ಷದ ಕಾರ್ಯ ಪದ್ಧತಿ ಮತ್ತು ಸಂಘಟನಾತ್ಮಕ ವಿಚಾರಗಳ ಕುರಿತು ಮಾರ್ಗದರ್ಶನ ನೀಡಿದರು.
ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ರಾಘವೇಂದ್ರ ಕಿಣಿ, ದಿನಕರ ಶೆಟ್ಟಿ ಹೆರ್ಗ ಮತ್ತು ರೇಷ್ಮಾ ಉದಯಕುಮಾರ್ ಶೆಟ್ಟಿ ಇವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಶಾಲು ಹೊದಿಸಿ ಅಭಿನಂದಿಸಲಾಯಿತು. ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಇವರು ಪಕ್ಷದ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಇವರ ಉಪಸ್ಥಿತಿಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಇವರು ಸಮಾರೋಪ ಭಾಷಣಗೈದರು.
ಸಾಮೂಹಿಕ ರಾಷ್ಟ್ರ ಗೀತೆಯೊಂದಿಗೆ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಸಮಾಪನಗೊಂಡಿತು. ಅಯೋಧ್ಯೆ ಶ್ರೀ ರಾಮ ಮಂದಿರದ ತೀರ್ಥ ಪ್ರಸಾದದೊಂದಿಗೆ ಸಾಮೂಹಿಕ ಸಹ ಭೋಜನ ನಡೆಯಿತು