ಮೈಸೂರು : ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಕೋರ್ ಕಮಿಟಿ ಸಭೆ ನಡೆಸಿದರು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್.ಬೊಮ್ಮಾಯಿ, ಶ್ರೀ ಡಿ. ವಿ. ಸದಾನಂದ ಗೌಡ, ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿಯಾದ ಡಾ. ರಾಧಾ ಮೋಹನ್ದಾಸ್ ಅಗರ್ವಾಲ್, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ಮಾಜಿ ಸಚಿವರಾದ ಶ್ರೀ ಕೆ. ಎಸ್. ಈಶ್ವರಪ್ಪ, ಶ್ರೀ ಶ್ರೀರಾಮುಲು, ಸಿ. ಟಿ. ರವಿ, ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಮಾಜಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಜೇಶ್ ಜಿ. ವಿ. ಉಪಸ್ಥಿತರಿದ್ದರು