Home » ಪ್ರತಿ ಬೂತ್ ನಲ್ಲಿ ಬಿಎಲ್ಎ- 2 ಗಳೊಂದಿಗೆ ಮತದಾರರ ಪಟ್ಟಿ ಪರಿಷ್ಕರಣಿ ಮಾಡುವಂತೆ ಸೂಚಿಸಿದ ಶಾಸಕ ಎ. ಕಿರಣ್ ಕೊಡ್ಗಿ
 

ಪ್ರತಿ ಬೂತ್ ನಲ್ಲಿ ಬಿಎಲ್ಎ- 2 ಗಳೊಂದಿಗೆ ಮತದಾರರ ಪಟ್ಟಿ ಪರಿಷ್ಕರಣಿ ಮಾಡುವಂತೆ ಸೂಚಿಸಿದ ಶಾಸಕ ಎ. ಕಿರಣ್ ಕೊಡ್ಗಿ

by Kundapur Xpress
Spread the love

ಕುಂದಾಪುರ:  ಯಾವ ಸಂದರ್ಭದಲ್ಲಿ ಬೇಕಾದರೂ ಸ್ಥಳೀಯ ತಾ.ಪಂ.ಜಿಲ್ಲಾಪಂ. ಚುನಾವಣೆಯಾಗಬಹುದಾಗಿದ್ದು. ಕಾರ್ಯಕರ್ತರು ಚುನಾವಣೆ ಎದುರಿಸಲು ಸಿದ್ಧರಿರಬೇಕು ಈ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರತಿ ಬೂತ್ ನಲ್ಲಿ ಬಿಎಲ್ಎ ಗಳು ಮತದಾರ ಪಟ್ಟಿ ಪರಿಷ್ಕರಣೆಯ ಕಾರ್ಯನಿರ್ವಹಿಸುವಂತೆ. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಅವರು ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ಮಾತನಾಡಿ. ಕಾರ್ಯಕರ್ತರಿಗೆ ಕರೆ ನೀಡಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ ಅವರು ಆತ್ಮ ನಿರ್ಭರ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಬಿ.ಎಲ್.ಎ-2 ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ ಬಿಜೆಪಿ ಕ್ಷೇತ್ರಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಮತದಾರ ಪಟ್ಟಿಯಲ್ಲಿ ಮೃತರಾದವರು, ಗ್ರಾಮ, ಪಟ್ಟಣ ಬಿಟ್ಟು ಹೋಗಿರುವವರನ್ನು ಗುರುತಿಸಬೇಕು ಮತ್ತು ಅದೆ ರೀತಿ ಹೊಸ ಮತದಾರರನ್ನು ಸೇರಿಸಬೇಕು ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸದಾನಂದ ಬಳ್ಕೂರು ಅವರು ಜಿಲ್ಲೆಯಲ್ಲಿ ನಡೆಯುವ ವಿಶೇಷ ಕಾರ್ಯಕಾರಿಣಿಯ ಬಗ್ಗೆ ಮಾಹಿತಿ ನೀಡಿದರು. ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮವನ್ನು ನಿರೂಪಿಸಿದರು ಸುಧೀರ್ ಕೆ ಎಸ್ ಸರ್ವರನ್ನು ಸ್ವಾಗತಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್ ಉಪಸ್ಥಿತರಿದ್ದರು
ಸದ್ರಿ ಈ ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲದ ಸರ್ವ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪುರಸಭಾ ಸದಸ್ಯರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

 

Related Articles

error: Content is protected !!