170
KAPU : ಉಡುಪಿ : ಚಿಕ್ಕಮಗಳೂರು ಲೋಕಸಭಾ ಚುನಾವಣಾ ಪೂರ್ವಭಾವಿಯಾಗಿ ನಡೆದ ಉದ್ಯಾವರ ಬೊಳ್ಜೆ ಕಾರ್ಯಕರ್ತರ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಶಾಸಕರು ಮಾತನಾಡಿ ನರೇಂದ್ರ ಮೋದಿ ಅವರ ಸಂಕಲ್ಪ ಗೆಲ್ಲಬೇಕಾದರೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಗೆಲ್ಲಬೇಕು ಹಾಗಾಗಿ ನಾವೆಲ್ಲರೂ ಒಟ್ಟಾಗಿ ಅವರ ಗೆಲುವಿಗೆ ಶ್ರಮಿಸೋಣ ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ವಕ್ತಾರರಾದ ವಿಜಯ್ ಕುಮಾರ್ ಉದ್ಯಾವರ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಸ್ಥಳೀಯರಾದ ಸುಂದರ್ ಕೋಟ್ಯಾನ್, ಸಂತೋಷ್ ಬೊಳ್ಜೆ ಹಾಗೂ ಪಕ್ಷದ ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

