ಕಾಪು : ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನದ ಕುರಿತು ಸದಸ್ಯತ್ವ ನೋಂದಣಿ ಅಭಿಯಾನದ ಸಂಚಾಲಕರು, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿ ಕೇಂದ್ರದ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರೊಂದಿಗೆ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆ ನಡೆಸಿ ಚರ್ಚಿಸಿದರು.
ಶಾಸಕರು ಮಾತನಾಡಿ ಉಡುಪಿ ಜಿಲ್ಲೆ ಸಂಘಟಿತ ಜಿಲ್ಲೆ ಕಾಪು ಕ್ಷೇತ್ರದಲ್ಲಿ ಅತ್ಯಧಿಕ ಸದಸ್ಯತ್ವ ನೋಂದಣಿ ಮಾಡುವ ಮೂಲಕ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಅಗ್ರಸ್ಥಾನದಲ್ಲಿ ಬರುವಂತೆ ಮಾಡಲು ನಾವೆಲ್ಲರೂ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಹಾಗೂ ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.