ಉಡುಪಿ : ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸದಸ್ಯತ್ವ ಅಭಿಯಾನ ಅಂಗವಾಗಿ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷರಾದ ಧೀರಜ್ ಮುನಿರಾಜು ಅವರ ಉಪಸ್ಥಿತಿಯಲ್ಲಿ ಬಾರ್ಕೂರು ಸಂಕಮ್ಮತಾಯಿ ಸಭಾಭವನದಲ್ಲಿ ನಡೆದ “ವಿದ್ಯಾರ್ಥಿಗಳು ಹಾಗೂ ಯುವಕರೊಂದಿಗೆ ಸಂವಾದ” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಶೆಟ್ಟಿ ಅವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ, ಕುಂದಾಪುರ ಮಂಡಲ ಅಧ್ಯಕ್ಷರು, ಯುವ ಮೋರ್ಚಾದ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.